ಇಂದು ಚೇಳ್ಳಗುರ್ಕಿ ಎರ್ರಿತಾತನವರ ಮಹಾರಥೋತ್ಸವಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಶ್ರೀ ಎರ್ರಿತಾತನವರ ಮಹಾರಥೋತ್ಸವ ಜೂ. 12ರಂದು ಸಂಜೆ 5 ಗಂಟೆಗೆ ಜರುಗಲಿದೆ. ರಥೋತ್ಸವ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜೂ. 5ರಂದು ಬೆಳಗ್ಗೆ 6 ಗಂಟೆಯಿಂದಲೇ ನಂದಿ ಧ್ವಜಾರೋಹಣ ಮತ್ತು ಸಪ್ತಭಜನೆ ಕಾರ್ಯಕ್ರಮ ಆರಂಭವಾಗಿದೆ.