ರೈತರಿಗೆ ಶೀಘ್ರವೇ ಬರ ಪರಿಹಾರ: ಕೃಷಿ ಸಚಿವಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ತಾವು ದೆಹಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರ ಜತೆ ಸಭೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಎನ್. ಚಲುವನಾರಾಯಣಸ್ವಾಮಿ ತಿಳಿಸಿದರು.