ಜಾನುವಾರುಗಳಿಗೆ ಮೇವಿನ ಕೊರತೆಯಾಗದಿರಲಿರೈತರ ಬೇಡಿಕೆಗನುಸಾರ ಮೇವು ಪೂರೈಕೆಗೆ ಹಾಗೂ ಮೇವು ಬ್ಯಾಂಕ್ ಸ್ಥಾಪನೆಗೂ ತ್ವರಿತ ಕ್ರಮ ಕೈಗೊಳ್ಳಬೇಕು. ಇಲಾಖೆಗೆ ರೈತರಿಂದಲೂ ಮೇವು ಖರೀದಿಸಲು ಅವಕಾಶವಿದ್ದು, ಈ ಕುರಿತು ರೈತರಿಗೆ ಜಾಗೃತಿ ಮೂಡಿಸುವುದರ ಜತೆಗೆ ಕಟಾವಿನ ನಂತರ ಉಳಿಯುವ ಮೇವನ್ನು ಸುಡದಂತೆ ರೈತರಿಗೆ ಅರಿವು ಮೂಡಿಸಬೇಕು ಎಂದು ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ, ಹರಪನಹಳ್ಳಿ ಮತ್ತು ಕೂಡ್ಲಿಗಿಯಲ್ಲಿ ಮೇವು ಬ್ಯಾಂಕ್ ಸ್ಥಾಪನೆ ಮಾಡಿ ಮೇವು ಸಂಗ್ರಹಿಸಲು ಸೂಚನೆ ನೀಡಿದರು.