ಎಸ್ಟಿ ಮೀಸಲು ಹೆಚ್ಚಳಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಿವಾಲ್ಮೀಕಿ ನಾಯಕ ಸಮಾಜಕ್ಕೆ ಶೇ. 7ರಷ್ಟು ಮೀಸಲಾತಿಯನ್ನು ಹಿಂದಿನ ಬಿಜೆಪಿ ಸರ್ಕಾರ ಘೋಷಣೆ ಮಾಡಿದೆ. ಸಂವಿಧಾನದ 9 ಶೆಡ್ಯೂಲ್ನಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಬಳ್ಳಾರಿಯ ಸಹಕಾರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈಗಾಗಲೇ ಶಿಕ್ಷಣದಲ್ಲಿ ಶೇ. ೭, ಉದ್ಯೋಗದಲ್ಲಿ ಹಾಗೂ ಮುಂಬಡ್ತಿಯಲ್ಲಿ ಶೇ. 7ರಷ್ಟು ಮೀಸಲಾತಿ ದೊರೆತಿದೆ. ವಾಲ್ಮೀಕಿ ಸಮಾಜದ ಅಧಿಕಾರಿಗಳು ಶೇ. ೭ರಷ್ಟು ಮೀಸಲಾತಿ ಪಡೆದಿದ್ದಾರೆ. ನನ್ನ ಅಧಿಕಾರ ಅವಧಿಯಲ್ಲಿ ಸಮಾಜದ ಏಳ್ಗೆಗೆ ಹಾಗೂ ಮೀಸಲಾತಿ ವಿಚಾರವಾಗಿ ಧ್ವನಿ ಎತ್ತಿದ್ದು, ಮೀಸಲಾತಿ ಜಾರಿಯೂ ಆಗಿದೆ ಎಂದರು.