2.73 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿವಿಜಯನಗರ ಜಿಲ್ಲೆಯಲ್ಲಿ 2 ಲಕ್ಷ 69 ಸಾವಿರ ಹೆಕ್ಟೇರ್ ಮಳೆಯಾಶ್ರಿತ ಬೆಳೆ ಹಾಗೂ 4 ಸಾವಿರ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ವಿಜಯನಗರ ಜಿಲ್ಲಾಡಳಿತ ಕೇಂದ್ರ ಬರ ಅಧ್ಯಯನ ತಂಡಕ್ಕೆ ವರದಿ ಸಲ್ಲಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಶನಿವಾರ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿದ್ದು, ಈ ವೇಳೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ಸಂಭವಿಸಿರುವ ಹಾನಿಯ ಕುರಿತು ತಂಡಕ್ಕೆ ಮಾಹಿತಿ ನೀಡಿತು.