ಬಜೆಟ್: ಬಳ್ಳಾರಿ ಜನರ ನಿರೀಕ್ಷೆಗಳ ಹುಸಿಗೊಳಿಸಿದ ಸಿಎಂಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಗಣಿ ಜಿಲ್ಲೆ ಬಳ್ಳಾರಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಭಾಗದ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಕೆಲವು ಘೋಷಿತ ಯೋಜನೆಗಳನ್ನು ಬಜೆಟ್ನಲ್ಲಿ ಮಂಡಿಸಿದ್ದರೆ, ಈ ಭಾಗದ ಅಭಿವೃದ್ಧಿ ನೆಲೆಯಲ್ಲಿ ಆಗಲೇಬೇಕಾದ ಯೋಜನೆಗಳಿಗೆ ಎಳ್ಳುನೀರು ಬಿಟ್ಟಿದ್ದಾರೆ.