• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಕುಂಠ ಏಕಾದಶಿಯ ಅಂಗವಾಗಿ ವಿಶೇಷ ಪೂಜೆ
ಕಂಪ್ಲಿ ಪಟ್ಟಣದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ನಿಮಿತ್ತ ವಿಶೇಷ ಪೂಜೆ ನಡೆಯಿತು. ದೇವರನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಪಂಚಾಮೃತಸಹಿತ ಅಷ್ಟೋತ್ತರ ಸಹಸ್ರ ನಾಮಾವಳಿ ನಡೆಯಿತು.
ರಾಷ್ಟ್ರೀಯ ರೈತ ದಿನಾಚರಣೆ, ವಿದ್ಯಾರ್ಥಿಗಳಿಗೆ ಕೃಷಿ ಪಾಠ
ರಾಷ್ಟ್ರೀಯ ರೈತರ ದಿನಾಚರಣೆ ಹಿನ್ನೆಲೆಯಲ್ಲಿ ಸಂಡೂರಿನ ಶ್ರೀಶೈಲ ವಿದ್ಯಾಕೇಂದ್ರದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಪಾಠ ಹೇಳಲಾಯಿತು.
ಶ್ರೀರಾಮನ ಭಾವಚಿತ್ರ ಶೋಭಾಯಾತ್ರೆ
ಸಂಡೂರು ಪಟ್ಟಣದ ವಿಠಲ ಮಂದಿರದಲ್ಲಿ ಶುಕ್ರವಾರ ಶ್ರೀರಾಮಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಿಂದ ಬಂದ ಅಕ್ಷತೆ ಹಾಗೂ ಕಳಶ ವಿತರಣೆ ಹಾಗೂ ಶ್ರೀರಾಮನ ಭಾವಚಿತ್ರದ ತಾಲೂಕು ಮಟ್ಟದ ಶೋಭಾಯಾತ್ರೆ ನಡೆಯಿತು. ಅಯೋಧ್ಯೆಯಿಂದ ತಂದಿದ್ದ ಅಕ್ಷತೆ ಹಾಗೂ ಕಳಶವನ್ನು ತಾಲೂಕಿನ ೨೨ ಮಂಡಳಗಳ ಮುಖಂಡರಿಗೆ ತಲುಪಿಸಿ, ಅದನ್ನು ಜನತೆಗೆ ತಲುಪಿಸಲು ತಿಳಿಸಲಾಯಿತು.
ಬಳ್ಳಾರಿ ಜಿಲ್ಲೆಯಲ್ಲಿ ನಾಲ್ವರಿಗೆ ಕೋವಿಡ್‌ ಸೋಂಕು
ಕೊರೋನಾ ಹೊಸ ರೂಪಾಂತರಿ ತಳಿಯ ಭೀತಿ ನಡುವೆ ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ನಾಲ್ಕು ಕೋವಿಡ್ ಪ್ರಕರಣಗಳು ಕಂಡು ಬಂದಿವೆ. ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ನಿಗ್ರಹಕ್ಕೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಬೆನ್ನಲ್ಲೇ ಸೋಂಕು ನಿಯಂತ್ರಣ ಕ್ರಮಗಳು ಚುರುಕುಗೊಂಡಿವೆ.
ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತನ್ನಿ
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಬಳ್ಳಾರಿಯ ಜಿಪಂನ ನಜೀರ್ ಸಭಾಂಗಣದಲ್ಲಿ ಸಮಾಲೋಚನೆ ಸಭೆ ನಡೆಸಿದರು. ಜಿಲ್ಲೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಪ್ರಯತ್ನ ಮಾಡಬೇಕು ಎಂದರು.
ಸಕಾಲಕ್ಕೆ ಬಾರದ ವೇತನ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಸಂಕಷ್ಟ
ಕುರುಗೋಡು ಸಮೀಪದ ಕುಡತಿನಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಆವರಣದಲ್ಲಿ ಇರುವ ಅಗ್ನಿಶಾಮಕ ದಳದ ಗುತ್ತಿಗೆ ಆಧಾರಿತ ನೌಕರರಿಗೆ ಕೆಲವು ತಿಂಗಳಿಂದ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ಬಿಟಿಪಿಎಸ್ ಆಡಳಿತ ಮಂಡಳಿ, ಟೆಂಡರ್‌ ಪಡೆದ ಏಜೆನ್ಸಿಯ ತಾಂತ್ರಿಕ ಸಮಸ್ಯೆಯಿಂದ ಪ್ರತಿ ತಿಂಗಳು ವೇತನ ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದರಿಂದ ಗುತ್ತಿಗೆ ಆಧಾರದ ನೌಕರರು ಸಮಸ್ಯೆ ಎದುರಿಸುವಂತಾಗಿದೆ.
369ನೇ ದಿನಕ್ಕೆ ಕಾಲಿಟ್ಟ ಭೂಸಂತ್ರಸ್ತರ ಧರಣಿ
ರೈತರ ಜಮೀನಿನಲ್ಲಿ ಕಾರ್ಖಾನೆ ಸ್ಥಾಪಿಸಿ, ಇಲ್ಲವೇ ಜಮೀನುಗಳನ್ನು ರೈತರಿಗೆ ವಾಪಸ್‌ ನೀಡಿ ಎಂದು ಒತ್ತಾಯಿಸಿ ಕುರುಗೋಡು ಸಮೀಪದ ಕುಡುತಿನಿಯಲ್ಲಿ ಭೂಸಂತ್ರಸ್ತ ರೈತರ ಹೋರಾಟ ಸಮಿತಿ ವತಿಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 369ನೇ ದಿನಕ್ಕೆ ಕಾಲಿಟ್ಟಿದೆ. 13 ವರ್ಷಗಳ ಹಿಂದೆ ಕುಡುತಿನಿ, ಹರಗಿನಡೋಣಿ, ವೇಣಿವೀರಾಪುರ, ಕೊಳಗಲ್ಲು, ಜಾನೆಕುಂಟೆ, ಸಿದ್ದಮ್ಮನಹಳ್ಳಿ ಸೇರಿದಂತೆ ಇತರ ಗ್ರಾಮಗಳ ರೈತರಿಂದ ಕಡಿಮೆ ದರದಲ್ಲಿ ಲಕ್ಷ್ಮೀ ಮಿತ್ತಲ್, ಅಗರ್ವಾಲ್ ಇತರ ಕಾರ್ಖಾನೆ ಸ್ಥಾಪನೆಗಾಗಿ ಜಮೀನುಗಳನ್ನು ವಶಪಡಿಸಿಕೊಂಡು ಇಂದಿಗೂ ಯಾವುದೇ ಕಾರ್ಖಾನೆ ಸ್ಥಾಪಿಸದೇ ರೈತರಿಗೆ ಮೋಸ ಮಾಡಿದ್ದಾರೆ ಎಂದು ಭೂಮಾಲೀಕರು ಆರೋಪಿಸಿದರು.
ರೈತರ ಎಲ್ಲ ಬೆಲೆಗಳಿಗೆ ಬೆಂಬಲ ಬೆಲೆ ಘೋಷಣೆಗೆ ಆಗ್ರಹ
ರೈತರ ಎಲ್ಲ ಬೆಲೆಗಳಿಗೆ ಕನಿಷ್ಠ ಬೆಂಬಲಬೆಲೆ ಘೋಷಣೆಯಾಗಬೇಕು ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಬಳ್ಳಾರಿ ಗಾಂಧಿಭವನದಲ್ಲಿ ಶುಕ್ರವಾರ ಜರುಗಿದ ಎಐಕೆಕೆಎಂಎಸ್ ಸಂಘಟನೆ ಹಮ್ಮಿಕೊಂಡಿದ್ದ ರೈತಕೃಷಿ ಕಾರ್ಮಿಕರ 2ನೇ ತಾಲೂಕು ಸಮ್ಮೇಳನದಲ್ಲಿ ಆಗ್ರಹಿಸಲಾಗಿದೆ.
ನಾಳೆಯಿಂದ ನೀನಾಸಂ-ಧಾತ್ರಿ ನಾಟಕೋತ್ಸವ
ರಂಗತೋರಣ ಸಾಂಸ್ಕೃತಿಕ ಸಂಘಟನೆ ಬಳ್ಳಾರಿಯ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ರಂಗತೋರಣ ಕಲಾಮಂದಿರದಲ್ಲಿ ಡಿ. 23ರಿಂದ ಮೂರುದಿನಗಳ ನೀನಾಸಂ-ಧಾತ್ರಿ ನಾಟಕೋತ್ಸವ ಹಮ್ಮಿಕೊಂಡಿದೆ.‌ ರಂಗತೋರಣ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ಆವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಂಗತೋರಣದ ಕಲಾಮಂದಿರದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಾಟಕಗಳ ಪ್ರದರ್ಶನ ನಡೆಯಲಿದೆ.
ಉಪರಾಷ್ಟ್ರಪತಿಗೆ ಅವಮಾನ-ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯಸಭೆಯ ಸಭಾಧ್ಯಕ್ಷ ಹಾಗೂ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಮಿಮಿಕ್ರಿ ‌ಮಾಡಿ ಅವಮಾನಿಸಿದ ತ್ರಮಮೂಲ ಕಾಂಗ್ರೆಸ್‌ ಹಾಗೂ ಕಾಂಗ್ರೆಸ್ ಸಂಸದರ ವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಗಡಗಿಚನ್ನಪ್ಪ ವೃತ್ತದ ಬಳಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು, ಉಪರಾಷ್ಟ್ರಪತಿಗಳ ಅಣುಕ‌ ಮಾಡಿದ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು.‌
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved