ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಕೊಪ್ಪಳ ಜಿಲ್ಲೆಯ ಹೊಸಬಂಡಿ ಹರ್ಲಾಪುರ ಗ್ರಾಮದಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಅತ್ಯಂತ ಕ್ರೂರವಾಗಿ ಹತ್ಯೆಗೈದ ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.