ಸಂಗೀತ, ಚಿತ್ರಕಲಾ, ರಂಗಕಲಾವಿದ ಶಿಕ್ಷಕರ ನೇಮಿಸಿ ಮಕ್ಕಳ ಬೌದ್ಧಿಕ, ಮಾನಸಿಕ, ಭಾವನಾತ್ಮಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಇವುಗಳು ತುಂಬಾ ಅವಶ್ಯಕ. ಇದನ್ನು ಗಂಭೀರವಾಗಿ ಪರಿಗಣಿಸಿಯೇ ಶಿಕ್ಷಣ ತಜ್ಞರು ಪ್ರೌಢಶಾಲಾ ಹಂತದಲ್ಲಿಯೇ ಮಕ್ಕಳಿಗೆ ಈ ಲಲಿತಕಲೆಗಳ ಅರಿವು ಮತ್ತು ತರಬೇತಿ ಸಿಗಲೆಂದು ಪರಿಣಿತಿ ಹೊಂದಿದ ಶಿಕ್ಷಕರ ನೇಮಕಾತಿಗೆ ಶಿಫಾರಸು ಮಾಡಿದ್ದಾರೆ. ಈ ಹಿಂದಿನ ಅನೇಕ ಶಿಕ್ಷಣ ಆಯೋಗಗಳೂ ಈ ಅಂಶವನ್ನು ಎತ್ತಿಹಿಡಿದಿವೆ ಎಂದರಲ್ಲದೆ, ರಾಜ್ಯ ಸರ್ಕಾರ ಸಂಗೀತ, ಚಿತ್ರಕಲಾ, ರಂಗಕಲಾ ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಬೇಕು