ಕಂಪ್ಲಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯ ಕಂಪುಎಮ್ಮಿಗನೂರು ಗ್ರಾಮದಿಂದ ಆರಂಭಗೊಂಡ ಜ್ಯೋತಿ ರಥಯಾತ್ರೆ ಮೆರವಣಿಗೆ ನೆಲ್ಲುಡಿ, ನೆಲ್ಲುಡಿ ಕೋಟಾಲ್ ಮಾರ್ಗವಾಗಿ ಪಟ್ಟಣಕ್ಕೆ ಆಗಮಿಸಿತು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಆಡಳಿತ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ರಥಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತಲ್ಲದೆ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಶಿವರಾಜ್ ಚಾಲನೆ ನೀಡಿದರು.