• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಲಾಯುಗದ್ದು ಎನ್ನಲಾದ ರೇಖಾಚಿತ್ರ ಪತ್ತೆ
ಅತ್ಯಂತ ಪ್ರಾಚೀನ ಮಾನವ ತನ್ನ ಭಾವನೆಗಳನ್ನು ಚಿತ್ರಗಳ ಮೂಲಕ ವ್ಯಕ್ತಪಡಿಸುತ್ತಿರುವ ಚಿತ್ರಗಳ ಕಲ್ಲಾಸರೆ ಕಂಡುಬಂದಿವೆ
ದೀಕ್ಷಾ ಭೂಮಿಯಾತ್ರೆ ರಥಕ್ಕೆ ಚಾಲನೆ
ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಶೈಲಿ ಹಾಗೂ ಸೈದ್ಧಾಂತಿಕ ನಿಲುವು ಸರ್ವಕಾಲಕ್ಕೂ ಆದರ್ಶನೀಯ
ನ. 7ರಂದು ಬೆಂಗಳೂರಿನಲ್ಲಿ ಉಗ್ರ ಹೋರಾಟ
ಗ್ರಾಪಂ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ನ. 7ರಂದು ಬೆಂಗಳೂರಿನಲ್ಲಿ ಉಗ್ರ ಹೋರಾಟ ನಡೆಸಲಾಗುವುದು
ಹಂಪಿಯಲ್ಲಿ ಧೂಳಿನ ಸಿಂಚನ
ವಿಶ್ವವಿಖ್ಯಾತ ಹಂಪಿಯಲ್ಲೀಗ ಧೂಳು ಏಳಲಾರಂಭಿಸಿದೆ. ದೇಶ- ವಿದೇಶಿ ಪ್ರವಾಸಿಗರು ಮೂಗು ಮುಚ್ಚಿಕೊಂಡೇ ಓಡಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಸ್ಮಾರಕಗಳ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು, ಹಂಪಿಯಲ್ಲಿ ಓಡಾಡಲು ಸಾಧ್ಯವಾಗದೆ ಸುಸ್ತಾಗುತ್ತಿದ್ದಾರೆ.
ಪೊಲೀಸ್-ಜನಸಮುದಾಯದ ನಡುವೆ ನಿಕಟ ಸಂಬಂಧ ಇರಲಿ
ಬಳ್ಳಾರಿ ನಗರದ ಪೊಲೀಸ್ ಕವಾಯಿತು ಮೈದಾನದಲ್ಲಿ ಶನಿವಾರ ಪೊಲೀಸ್ ಹುತಾತ್ಮ ದಿನಾಚರಣೆ ನಡೆಯಿತು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪಾಲ್ಗೊಂಡು ಮಾತನಾಡಿ, ಪೊಲೀಸ್ ಮತ್ತು ಜನಸಮುದಾಯದ ನಡುವಿನ ಸಂಬಂಧ ನಿಕಟವಾಗಿರಬೇಕು ಹಾಗೂ ಪರಸ್ಪರ ನಂಬಿಕೆಗಳು ಬೆಳೆಯಬೇಕು ಎಂದು ಆಶಿಸಿದರು. ಸಮಾರಂಭದಲ್ಲಿ ಹಾಜರಿದ್ದ ನಗರದ ಗಣ್ಯರು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರಮುಖರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು. ಹುತಾತ್ಮರ ಗೌರವ ಸೂಚಕವಾಗಿ ಮೂರು ಬಾರಿ ಕುಶಾಲುತೋಪು ಹಾರಿಸುವ ಮೂಲಕ ಸಂತಾಪ ಸೂಚಿಸಲಾಯಿತು.
ಪೊಲೀಸರ ದಾಳಿ, ₹1.41 ಕೋಟಿ ಮೌಲ್ಯದ ಪಟಾಕಿ ವಶ
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣ ಮತ್ತು ತಾಲೂಕಿನ ವಿವಿಧೆಡೆ ದಾಳಿ ನಡೆಸಿದ ಪೊಲೀಸರು ಪಟಾಕಿ ಅಂಗಡಿಗಳು ಹಾಗೂ ಗೋದಾಮುಗಳಲ್ಲಿ ಸಂಗ್ರಹಿಸಿದ್ದ ಸುಮಾರು ₹1.41 ಕೋಟಿ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಉಮ್ರಾ ಯಾತ್ರೆ ಮಧ್ಯೆ ಇಮಾಮ್ ಪತ್ನಿ ಸಾವು
ಕನ್ನಡಪ್ರಭವಾರ್ತೆ ಕೂಡ್ಲಿಗಿತಾಲೂಕಿನ ಗುಡೇಕೋಟೆ ಗ್ರಾಮದ ಮಸೀದಿಯ ಇಮಾಮ್ ಜಹೀರ್ ಹುಸೇನ್ ತನ್ನ ಪತ್ನಿ ಸೀಮಾ ಬೇಗಂ (52) ಪವಿತ್ರ ಉಮ್ರಾ ಯಾತ್ರೆಗೆ ಹೋಗುವ ಮಾರ್ಗಮಧ್ಯೆ ಬಹ್ರೇನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಬಳಿಕ ಕರ್ನಾಟಕ ಕಲ್ಚರಲ್‌ ಸಂಘಟನೆ ಸಹಾಯದಿಂದ ಬಹ್ರೇನಲ್ಲೇ ಅವರ ಅಂತ್ಯಕ್ರಿಯೆ ನಡೆಸಲಾಗಿದೆ.ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ 6 ವರ್ಷಗಳಿಂದ ಇಲ್ಲಿಯ ಮಸೀದಿಯಲ್ಲಿ ಇಮಾಮ್ ಆಗಿ ಜಹೀರ್ ಹುಸೇನ್ ಸೇವೆ ಸಲ್ಲಿಸುತ್ತಿದ್ದಾರೆ. ದಂಪತಿ ಬಿಹಾರ ಮೂಲದವರು. ಈ ಹಿಂದೆ ಬಳ್ಳಾರಿಯಲ್ಲಿ ಹಲವು ವರ್ಷಗಳ ಕಾಲ ಇಮಾಮ್ ಸೇವೆ ಮಾಡಿದ್ದಾರೆ. ಇವರಿಗೆ ಇಬ್ಬರು ಪುತ್ರರಿದ್ದು, ಓರ್ವ ಬಿಹಾರನಲ್ಲಿ ಮತ್ತೋರ್ವ ಓಡಿಶಾದಲ್ಲಿ ಇದ್ದಾರೆ.
ಹೃದಯಾಘಾತದಿಂದ ಪಿಎಚ್‌ಡಿ ವಿದ್ಯಾರ್ಥಿ ಸಾವು
ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಪಿಎಚ್‌ಡಿ ವಿದ್ಯಾರ್ಥಿ ರಾಜಶೇಖರ್ ಬಡಿಗೇರ್ (30) ಬಸ್‌ನಲ್ಲಿ ಜೇವರ್ಗಿ ಸಮೀಪ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ ಅ.19ರ ರಾತ್ರಿ 10 ಗಂಟೆ ಹೊತ್ತಿಗೆ ಹೊಸಪೇಟೆಯಿಂದ ತನ್ನ ಊರಾದ ಜೇವರ್ಗಿಗೆ ಬಸ್‌ನಲ್ಲಿ ತೆರಳಿದ್ದು, ಬೆಳಗ್ಗೆ ಜೇವರ್ಗಿ ಊರು ಬಂದಾಗ, ಕಂಡಕ್ಟರ್‌ ಎಬ್ಬಿಸಲು ಹೋದಾಗ ಮೃತಪಟ್ಟಿದ್ದರು ಎಂದು ಕನ್ನಡ ವಿವಿ ಮೂಲಗಳು ತಿಳಿಸಿವೆ.
ನಾಟಕ ಕಲೆಗೆ ಸರ್ಕಾರದ ಸಹಕಾರ ಅತಿ ಮುಖ್ಯ
ಕನ್ನಡಪ್ರಭ ವಾರ್ತೆ ಮರಿಯಮ್ಮನಹಳ್ಳಿನಾಟಕ ಕಲೆಗೆ ಸರ್ಕಾರದ ಸಹಕಾರ ಅತಿ ಮುಖ್ಯವಾಗಿದ್ದು, ಕಲಾವಿದರು ತಮ್ಮ ಕಲೆ ಪ್ರದರ್ಶಿಸಲು ಸರ್ಕಾರದ ಪ್ರೋತ್ಸಾಹಬೇಕಾಗಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ರಂಗ ಕಲಾವಿದೆ ಡಾ.ಕೆ. ನಾಗರತ್ನಮ್ಮ ಹೇಳಿದರು.ಇಲ್ಲಿನ ದುರ್ಗಾದಾಸ್‌ ರಂಗಮಂದಿರದಲ್ಲಿ ಬುಧವಾರ ಸಂಜೆ ಅಕ್ಷರ ಜ್ಞಾನ ಕಲಾಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯನಗರ ಸಂಯುಕ್ತಾಶ್ರದಲ್ಲಿ ಸಮೂಹ ನೃತ್ಯ ಮತ್ತು ನಾಟಕ ಸುಗ್ಗಿ ಸಂಭ್ರಮ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿದರು.
ಸಿಬಿಐ ಮೂಲಕ ಡಿ.ಕೆ. ಶಿವಕುಮಾರ್‌ಗೆ ಕೇಂದ್ರ ಸರ್ಕಾರ ಕಿರುಕುಳ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸಿಬಿಐ ಮೂಲಕ ಟಾರ್ಚರ್ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಆರೋಪಿಸಿದರು. ನಗರದಲ್ಲಿ ಗುರುವಾರ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಲೋಕಸಭಾ ಎಸ್ಸಿ, ಎಸ್ಟಿ ಮೀಸಲು ಕ್ಷೇತ್ರಗಳ ವ್ಯಾಪ್ತಿಯ ಲೀಡರ್‌ಶಿಪ್‌ ಡೆವಲಪ್‌ಮೆಂಟ್ ಮಿಷನ್ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved