ಲೋಕ್ ಅದಾಲತ್‌ನಲ್ಲಿ 12 ಸಾವಿರ ಪ್ರಕರಣ ಇತ್ಯರ್ಥ: ಕೆ.ಜಿ. ಶಾಂತಿಬಳ್ಳಾರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಶನಿವಾರ ರಾಜಿ ಸಂಧಾನದ ಮೂಲಕ ಹಲವು ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ. ಶಾಂತಿ ಹೇಳಿದರು.