ಬಳ್ಳಾರಿ ಹಾಲು ಒಕ್ಕೂಟದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ (ರಾಬಕೊವಿ) ಒಕ್ಕೂಟದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ಕೆಎಂಎಫ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಭೀಮಾನಾಯ್ಕ ಸೇರಿದಂತೆ ನಾಲ್ಕು ಜಿಲ್ಲೆಗಳಿಂದ ಸ್ಪರ್ಧಿಯಲ್ಲಿದ್ದವರು ಸಂಘದ ನಿರ್ದೇಶಕರಾಗಿ ಚುನಾಯಿತಗೊಂಡಿದ್ದಾರೆ.