ಮಹೇಶ ಜೋಶಿ ದುರಾಡಳಿತ ಮಿತಿಮೀರಿದ್ದು, ಕಸಾಪಕ್ಕೆ ಆಡಳಿತಾಧಿಕಾರಿ ನೇಮಿಸಲು ಒತ್ತಾಯಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಅವರ ಆರ್ಥಿಕ ದುರಾಡಳಿತ ಮಿತಿಮೀರಿದ್ದು, ಕೂಡಲೇ ಪರಿಷತ್ಗೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಹಿರಿಯ ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಡಾ. ವಸುಂಧರಾ ಭೂಪತಿ ಹಾಗೂ ಜಾಣಗೆರೆ ವೆಂಕಟರಾಮಯ್ಯ ಆಗ್ರಹಿಸಿದ್ದಾರೆ.