ಬಳ್ಳಾರಿಯಲ್ಲಿ ಇನ್ಮುಂದೆ ಹೆಲ್ಮೆಟ್ ಕಡ್ಡಾಯನಗರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಂದ ಸಾವಿನ ಪ್ರಮಾಣವೂ ಏರಿಕೆಯಾಗುತ್ತಿದ್ದು, ಜನರನ್ನು ಸಾವಿನ ದವಡೆಯಿಂದ ಪಾರು ಮಾಡಲು ಜಿಲ್ಲಾ ಪೊಲೀಸ್ ಇಲಾಖೆ ಜೂ. 6 ರಿಂದ ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ಹೆಲ್ಮೆಟ್ ಇಲ್ಲದೆ ರಸ್ತೆಗಿಳಿಯುವವರಿಗೆ ದಂಡ ಪ್ರಯೋಗಕ್ಕೂ ಪೊಲೀಸ್ ಇಲಾಖೆ ಸಜ್ಜಾಗಿದೆ.