ಜವಳಿ, ಕೈಮಗ್ಗ ಇಲಾಖೆ ಕಚೇರಿ ಎತ್ತಂಗಡಿ ಖಂಡಿಸಿ ಪ್ರತಿಭಟನೆಇಲ್ಲಿನ ಜವಳಿ ಮತ್ತು ಕೈಮಗ್ಗ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿಗೆ ಸ್ಥಳಾಂತರ ಮಾಡುವುದನ್ನು ಕೈಬಿಟ್ಟು, ಬಳ್ಳಾರಿಯಲ್ಲೇ ಮುಂದುವರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.