ಸಾರಾಂಶ
ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮಲ್ಲಿ ಸಾಧಿಸಿದ ಪ್ರಗತಿ ಮಾದರಿ
ಕನ್ನಡಪ್ರಭ ವಿಜಯಪುರ
ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮಲ್ಲಿ ಸಾಧಿಸಿದ ಪ್ರಗತಿ ಮಾದರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.ಜಿಪಂ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ತಂಡದ ವೈದ್ಯಾಧಿಕಾರಿಗಳಿಗೆ, ತಾಲೂಕಾ ಆರೋಗ್ಯ ಅಧಿಕಾರಿಗಳಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಅನಾರೋಗ್ಯಕ್ಕೆ ಒಳಗಾದ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಔಷಧೋಪಚಾರ ಮತ್ತು ಸಮಾಲೋಚನೆ ಮೂಲಕ ಪರಿಹಾರ ಕಲ್ಪಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ, ಕಾರ್ಯನಿರ್ವಹಿಸುವಂತೆ ತಿಳಿಸಿದರು. ಸದ್ಯ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯಡಿ ರಕ್ತ ತಪಾಸಣೆ ಕೈಗೊಳ್ಳಲಾಗುತ್ತಿದೆ. ರಕ್ತ ಹೀನತೆಯಿಂದ ಬಳಲುವ ಮಕ್ಕಳಿಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಅನುಕೂಲವಿರುತ್ತದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಅಧಿಕಾರಿಗಳಿಗೆ ಸೂಚಿಸಿದರು.ಡಾ.ಕೆ.ಡಿ.ಗುಂಡಬಾವಡಿ, ಡಾ.ಬಸವರಾಜ ಹುಬ್ಬಳ್ಳಿ, ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಸಿ.ಕೆ ಹೊಸಮನಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಕವಿತಾ ದೊಡಮನಿ, ಮಹಾದೇವ ನೀಲಂಗಿ, ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿಗಳಾದ ಸುರೇಶ ಹೊಸಮನಿ, ತಾಲೂಕಿನ ಎಲ್ಲ ಬಿ.ಇ.ಒ, ಸಿಡಿಪಿಓ, ಟಿ.ಎಚ್.ಓ ಇದ್ದರು.