ಸಾರಾಂಶ
ಪ್ರಾಣಿಬಲಿ ತಡೆಯಲು ದೊಣ್ಣೆಗುಡ್ಡ ಗ್ರಾಮದಲ್ಲಿ ಪೂರ್ವಭಾವಿ ಸಭೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಜಾತ್ರೆಯ ಮುಗಿಯುವ ತನಕ ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ, ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪ್ರಾಣಿ ಬಲಿ ತಡೆಯಬೇಕು.
ಕುಷ್ಟಗಿ:
ತಾಲೂಕಿನ ದೊಣ್ಣೆಗುಡ್ಡ ಗ್ರಾಮದ ದುರ್ಗಾದೇವಿಯ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಿದ್ದು, ಪ್ರಾಣಿಬಲಿ ಕೊಡುವುದು ಕಂಡು ಬಂದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಎಚ್ಚರಿಸಿದ್ದಾರೆ.ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ದೊಣ್ಣೆಗುಡ್ಡ ಗ್ರಾಮದ ದುರ್ಗಾದೇವಿ ಜಾತ್ರೆ ಕುರಿತು ನಡೆದ ಸಭೆ ಹಾಗೂ ಅಹಿಂಸಾ ಪ್ರಾಣಿ ದಯಾ ಅಧ್ಯಾತ್ಮ ಸಂದೇಶ ಯಾತ್ರೆಯ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯಾವುದೇ ದೇವರು ಪ್ರಾಣಿಬಲಿ ಕೇಳುವುದಿಲ್ಲ. ಪ್ರಾಣಿ ಬಲಿಕೊಡುವುದು ಅಪರಾಧವಾಗಿದೆ ಎಂದರು.
ಪ್ರಾಣಿಬಲಿ ತಡೆಯಲು ದೊಣ್ಣೆಗುಡ್ಡ ಗ್ರಾಮದಲ್ಲಿ ಪೂರ್ವಭಾವಿ ಸಭೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಜಾತ್ರೆಯ ಮುಗಿಯುವ ತನಕ ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ, ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪ್ರಾಣಿ ಬಲಿ ತಡೆಯಬೇಕು. ಗ್ರಾಮದ ಸುತ್ತಲೂ ಚೆಕ್‌ಪೋಸ್ಟ್ ಹಾಕಲಾಗಿದ್ದು, ಯಾವುದೇ ಪ್ರಾಣಿ ಸಾಗಿಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾ ಸಂಘದ ಅಧ್ಯಕ್ಷ ದಯಾನಂದ ಸ್ವಾಮೀಜಿ ಮಾತನಾಡಿ, ದುರ್ಗಾದೇವಿ ಜಾತ್ರೆ ಶುಕ್ರವಾರದಿಂದ ಆರಂಭವಾಗಿದ್ದು ಮಾ. 4ರ ವರೆಗೆ ನಡೆಯಲಿದೆ. ಈ ವೇಳೆ ಭಕ್ತರು ಪ್ರಾಣಿ ಬಲಿ ನೀಡಲಿದ್ದು ಇದರಿಂದ ಅನೇಕ ಸಮಸ್ಯೆಗಳು ಬರಲಿವೆ. ಆದರಿಂದ ಅಧಿಕಾರಿಗಳು ಇದನ್ನು ತಡೆಯಬೇಕೆಂದು ಮನವಿ ಮಾಡಿದರು.
ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.