ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳಲ್ಲಿ ಪಕ್ಕದಲ್ಲಿ ಹಸಿ ಕಸ ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಬೇಕಿದೆ. ಗಣೇಶಮೂರ್ತಿ ವಿಸರ್ಜನೆಗೆ ಪ್ರತ್ಯೇಕ ಮೊಬೈಲ್ ಟ್ಯಾಂಕ್ ವಾಹನದ ವ್ಯವಸ್ಥೆ ಮಾಡಬೇಕು. ಸಾರ್ವಜನಿಕ ಗಣಪತಿ ವಿಸರ್ಜಿಸಲು ನಿರ್ದಿಷ್ಟ ಜಲಮೂಲ ನಿಗದಿಪಡಿಸಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸುವ ಪ್ರತಿ ಸಮಿತಿಯವರು ಕಡ್ಡಾಯವಾಗಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣಪತಿ ವಿಗ್ರಹಗಳ ತಯಾರಿಕೆ, ಸಂಗ್ರಹ, ಮಾರಾಟವನ್ನು ನಿಷೇಧಿಸಲಾಗಿದೆ. ಮಣ್ಣಿನಿಂದ ಮಾಡಿದ ಅಥವಾ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾತ್ರ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ-ಗಣೇಶೋತ್ಸವ ಸಂಬಂಧ ಗಣೇಶಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಿಒಪಿ ಮತ್ತು ಬಣ್ಣ ಲೇಪಿತ ಗಣಪತಿ ವಿಗ್ರಹ ತಯಾರಿಸುವ ಹಾಗೂ ಮಾರಾಟ ಮಾಡುವವರಿಗೆ ಪರವಾನಗಿ ನೀಡುವಂತಿಲ್ಲ. ಅನಧಿಕೃತವಾಗಿ ತಯಾರಿ ಮಾರಾಟ ಮಾಡಿದರೆ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಸೂಚಿಸಿದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿಒಪಿ ಹಾಗೂ ಬಣ್ಣದ ವಿಗ್ರಹಗಳಿದ್ದಲ್ಲಿ ಪರಿಶೀಲಿಸಿ ಸುಪರ್ದಿಗೆ ತೆಗೆದುಕೊಳ್ಳಬೇಕು. ಹೊರ ಸ್ಥಳಗಳಿಂದ ಬರಬಹುದಾದ ಪಿಒಪಿ ಮೂರ್ತಿ ತಡೆಗಟ್ಟಲು ಚೆಕ್ ಪೊಸ್ಟ್ ನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳಲ್ಲಿ ಪಕ್ಕದಲ್ಲಿ ಹಸಿ ಕಸ ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಬೇಕಿದೆ. ಗಣೇಶಮೂರ್ತಿ ವಿಸರ್ಜನೆಗೆ ಪ್ರತ್ಯೇಕ ಮೊಬೈಲ್ ಟ್ಯಾಂಕ್ ವಾಹನದ ವ್ಯವಸ್ಥೆ ಮಾಡಬೇಕು. ಸಾರ್ವಜನಿಕ ಗಣಪತಿ ವಿಸರ್ಜಿಸಲು ನಿರ್ದಿಷ್ಟ ಜಲಮೂಲ ನಿಗದಿಪಡಿಸಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸುವ ಪ್ರತಿ ಸಮಿತಿಯವರು ಕಡ್ಡಾಯವಾಗಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರು ಮಾತನಾಡಿ ಗಣಪತಿ ಪ್ರತಿಷ್ಠಾಪನೆಗೆ ಮೊದಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಗಣಪತಿ ಸ್ಥಾಪನೆ ಸ್ಥಳದಲ್ಲಿ ವಿದ್ಯುತ್ ಸಂಪರ್ಕ ಸರಿಯಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ವಿಸರ್ಜನಾ ಮೆರವಣಿಗೆ ಸಾಗುವ ಮಾರ್ಗಗಳ ಬಗ್ಗೆ ಮೊದಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಡಿವೈಎಸ್‌ಪಿ ಸ್ನೇಹರಾಜು, ಮೋಹನ್, ಪರಿಸರ ಅಧಿಕಾರಿ ಉಮಾಶಂಕರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ತಾಲೂಕಿನ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.--------------

3ಸಿಎಚ್ಎನ್10

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಹೊರತರಲಾಗಿರುವ ಕರಪತ್ರವನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಬಿಡುಗಡೆ ಮಾಡಿದರು.