ಉಳ್ಳವರು ಗ್ಯಾರಂಟಿ ಯೋಜನೆ ಪಡೆದರೆ ಬಂದ್‌: ಸಚಿವ ಮಂಕಾಳ ವೈದ್ಯ

| Published : Sep 02 2024, 02:03 AM IST

ಸಾರಾಂಶ

ಸರ್ಕಾರ ನುಡಿದಂತೆ ನಡೆದಿದೆ. ಸುಳ್ಳು ಹೇಳಲು, ರಾಜಕೀಯ ಮಾಡಲು ಈ ಯೋಜನೆ ತಂದಿಲ್ಲ. ಇದು ಬಡವರಿಗೆ ಕೊಡುವ ಯೋಜನೆ ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಹೊನ್ನಾವರ: ಬಡವರ ಜೀವನ ನಿರ್ವಹಣೆಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಉಳ್ಳವರು ಇದರ ಪ್ರಯೋಜನ ಪಡೆದುಕೊಳ್ಳಬಾರದು. ತೆಗೆದುಕೊಂಡರೆ ಬಂದ್ ಮಾಡಬೇಕಾಗುತ್ತದೆ ಎಂದು ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಸಿದರು.ತಾಪಂ ಸಭಾಭವನದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಸಿ ಮಾತನಾಡಿದ ಅವರು, ಸರ್ಕಾರ ನುಡಿದಂತೆ ನಡೆದಿದೆ. ಸುಳ್ಳು ಹೇಳಲು, ರಾಜಕೀಯ ಮಾಡಲು ಈ ಯೋಜನೆ ತಂದಿಲ್ಲ. ಇದು ಬಡವರಿಗೆ ಕೊಡುವ ಯೋಜನೆ. ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸರ್ಕಾರ ಗ್ಯಾರಂಟಿ ಪ್ರಾಧಿಕಾರ ರಚನೆ ಮಾಡಿದೆ ಎಂದರು.ದೇಶದ ಇತಿಹಾಸದಲ್ಲಿ ಬೇರೆ ಯಾವ ರಾಜ್ಯದಲ್ಲೂ ಇರದ ಗ್ಯಾರಂಟಿ ಯೋಜನೆಯನ್ನು ನಮ್ಮ ಸರ್ಕಾರ ನೀಡಿದೆ. ಚುನಾವಣೆ ಪೂರ್ವ ನುಡಿದಂತೆ 5 ಗ್ಯಾರಂಟಿ ಯೋಜನೆಯನ್ನು 5 ತಿಂಗಳಿನಲ್ಲಿ ಅನುಷ್ಠಾನ ಮಾಡಿದ್ದೇವೆ. ಈ ಯೋಜನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರೇ ಒಪ್ಪಿಕೊಂಡಿದ್ದಾರೆ. ಅಧಿಕಾರಿಗಳು ಶೇ. 90ರಷ್ಟು ಯೋಜನೆ ತಲುಪಿಸಿದ್ದಾರೆ ಎಂದರು.ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಪ್ರಾಧಿಕಾರ

ಹೊನ್ನಾವರ: ಗ್ಯಾರಂಟಿ ಯೋಜನೆ ನೂರಕ್ಕೆ ನೂರು ತಲುಪಬೇಕು ಎಂದು ರಾಜ್ಯದಲ್ಲಿ ಪ್ರಾಧಿಕಾರ ರಚನೆ ಮಾಡಿ ರಾಜ್ಯ, ಜಿಲ್ಲೆ, ತಾಲೂಕು ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದರು.ತಾಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಸಚಿವರು, ತಾಲೂಕು ಸಮಿತಿಯವರು ಐದು ಇಲಾಖೆ ಅಧಿಕಾರಿಗಳ ಸಲಹೆ ಪಡೆದು, ಯೋಜನೆ ಪ್ರಯೋಜನ ಪಡೆಯದವರ ಮನೆಗೆ ಹೋಗಿ ಏನೇ ಸಮಸ್ಯೆ ಇದ್ದರೂ ಪರಿಹರಿಸಿ ಯೋಜನೆಯಿಂದ ವಂಚಿತರಾಗದ ಹಾಗೆ ಮಾಡಬೇಕು ಎಂದರು.

ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ್ ನಾಯ್ಕ ಮಾತನಾಡಿ, ಮಧ್ಯವರ್ತಿಗಳಿಲ್ಲದೆ ನೇರವಾಗಿ ಬಡವರ ಖಾತೆಗೆ ಜಮಾ ಆಗುತ್ತಿದೆ. ಯೋಜನೆ ತಲುಪದೇ ಇದ್ದವರ ಮನೆಗೆ ಹೋಗಿ ಕರೆತಂದು ಕೆಲಸ ಮಾಡಿಕೊಡುವ ಜವಾಬ್ದಾರಿಯನ್ನು ಪ್ರಾಧಿಕಾರ ಮಾಡುತ್ತದೆ ಎಂದರು.ತಾಲೂಕು ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯ್ಕ ಮಾತನಾಡಿ, ಸರ್ಕಾರ ಐದು ಗ್ಯಾರಂಟಿ ಯೋಜನೆಯ ಮೂಲಕ ಆರ್ಥಿಕ ಬಲ ನೀಡಿದೆ. ಈ ಯೋಜನೆ ಕಾರ್ಯರೂಪಕ್ಕೆ ತರಲು ಪ್ರತಿಯೊಬ್ಬರೂ ಸಹಕಾರ ನೀಡಿ ಎಂದರು.ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ, ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರ ನುಡಿದಂತೆ ನಡೆದಿದೆ ಎಂದರು.ವೇದಿಕೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಸ್. ನಾಯ್ಕ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ ನಾಯ್ಕ ಉಪಸ್ಥಿತರಿದ್ದರು.