25ರಂದು ಕೆನಾಲ್ ಕಾಮಗಾರಿ ವಿರೋಧಿಸಿ ಬಂದ್

| Published : Jun 13 2024, 12:50 AM IST

25ರಂದು ಕೆನಾಲ್ ಕಾಮಗಾರಿ ವಿರೋಧಿಸಿ ಬಂದ್
Share this Article
  • FB
  • TW
  • Linkdin
  • Email

ಸಾರಾಂಶ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಜಿಲ್ಲಾದ್ಯಂತ ಜೂ. 25ರಂದು ಬಂದ್ ಮಾಡುವುದಾಗಿ ಬಿಜೆಪಿ ಮುಖಂಡ ಎಸ್. ಡಿ. ದಿಲೀಪ್ ಕುಮಾರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಗುಬ್ಬಿ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಜಿಲ್ಲಾದ್ಯಂತ ಜೂ. 25ರಂದು ಬಂದ್ ಮಾಡುವುದಾಗಿ ಬಿಜೆಪಿ ಮುಖಂಡ ಎಸ್. ಡಿ. ದಿಲೀಪ್ ಕುಮಾರ್ ತಿಳಿಸಿದ್ದಾರೆ.

ಪಟ್ಟಣದ ಪ್ರವಾಸ ಮಂದಿರ ಆವರಣದಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ವತಿಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ. ತುಮಕೂರು ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಿದ್ದಾರೆ ಎಂದರು.ತುಮಕೂರು ಜಿಲ್ಲಾ, ಗುಬ್ಬಿ ತಾಲೂಕಿನ ಎಲ್ಲಾ ರೈತರು, ಮಹಿಳೆಯರು, ವರ್ತಕರು ಹಾಗೂ ಸಾರ್ವಜನಿಕರು ಪಕ್ಷ ಬೇದವಿಲ್ಲದೆ ಈ ಬಂದ್‌ನಲ್ಲಿ ಭಾಗವಹಿಸಬೇಕು. ಗುಬ್ಬಿ, ತುರುವೇಕೆರೆ, ಶಿರಾ, ಮಧುಗಿರಿ, ಕೊರಟಗೆರೆ, ತುಮಕೂರು ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಸುಮಾರು 23 ಅಚ್ಚುಕಟ್ಟು ಪ್ರದೇಶಗಳು ಸಂಕಷ್ಟಕ್ಕೆ ಸಿಲುಕಿದೆ ಎಂದರು.ಜೆಡಿಎಸ್ ಮುಖಂಡ ಬಿ. ಎಸ್. ನಾಗರಾಜು ಮಾತನಾಡಿ, ಯಾವುದೇ ಕಾರಣಕ್ಕೂ ಹೇಮಾವತಿ ಕೆನಾಲ್ ಕಾಮಗಾರಿ ಕೆಲಸ ಮಾಡುವುದಕ್ಕೆ ಬಿಡುವ ಮಾತೇ ಇಲ್ಲ. ನಮ್ಮ ಪ್ರಾಣ ಹೋದರೂ ಲೆಕ್ಕಿಸುವುದಿಲ್ಲ ಪೊಲೀಸರು ನಮ್ಮನ್ನು ಬಂಧಿಸಲಿ ನಾವು ಜಗ್ಗುವುದಿಲ್ಲ. ಈ ಹೋರಾಟಕ್ಕೆ ರೈತರ ಮುಖಂಡರು ಸಾರ್ವಜನಿಕರ ಬೆಂಬಲ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಜೆಡಿಎಸ್ ಮುಖಂಡ ಹೊನ್ನಗಿರಿಗೌಡ ಮಾತನಾಡಿ, ಹೇಮಾವತಿ ನೀರು ತುಮಕೂರು ಜಿಲ್ಲೆಯ ರೈತರು ಮತ್ತು ಕೃಷಿಯ ಜೀವನಾಡಿಯಾಗಿದೆ. ಗುಬ್ಬಿ ತಾಲೂಕಿನಿಂದ ಮಾಗಡಿ, ರಾಮನಗರಕ್ಕೆ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ಹೇಮಾವತಿ ನೀರು ಹರಿದರೆ ತುಮಕೂರು ಜಿಲ್ಲೆಯ ಜನರಿಗೆ ಮರಣ ಶಾಸನವಾಗಲಿದೆ. ಇದರಿಂದ ಜಿಲ್ಲೆಯ ಜನರಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರುಬಿಜೆಪಿ ತಾಲೂಕು ಅಧ್ಯಕ್ಷ ಪಂಚಾಕ್ಷರಿ, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕವೀರಯ್ಯ, ತಾಲೂಕು ರೈತ ಸಂಘದ ಅಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಎಚ್ ಟಿ ಭೈರಪ್ಪ, ಜಿ ಎನ್ ಬೆಟ್ಟಸ್ವಾಮಿ, ಸಿದ್ದಗಂಗಮ್ಮ, ಯೋಗಾನಂದ ಕುಮಾರ್, ಕಳ್ಳಿಪಾಳ್ಯ ಲೋಕೆಶ್, ವರ್ತಕ ಸಂಘದ ಅಧ್ಯಕ್ಷ ದಯಾನಂದ್, ಪಟ್ಟಣ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ನಂಜೇಗೌಡ, ರೈತ ಎಚ್ ಡಿ ಎಲ್ಲಪ್ಪ ಹಾಜರಿದ್ದರು.