ಸಾರಾಂಶ
ತುರ್ವಿಹಾಳ ಪಟ್ಟಣದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬಹಿರಂಗ ಪ್ರಚಾರಸಭೆಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಮಾತನಾಡಿದರು.
ತುರ್ವಿಹಾಳ: ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಮಳೆ, ಬೆಳೆ ಚೆನ್ನಾಗಿತ್ತು. ಆದರೆ, ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಬರಗಾಲ ಬಂದಿದೆ, ಕುಡಿಯಲು ನಿರೀಲ್ಲದೇ ಸಾರ್ವಜನಿಕರ ಪರದಾಟ ನಡೆಸಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ಆರೋಪಿಸಿದರು.
ಕೊಪ್ಪಳ ಲೋಕಸಭಾ ಚುನಾವಣೆ ಅಂಗವಾಗಿ ಪಟ್ಟಣದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಬಹಿರಂಗ ಪ್ರಚಾರಸಭೆ ಉದ್ಘಾಟಿಸಿ ಮಾತನಾಡಿದರು. ಹಿಂದೂಗಳಿಗೆ ರಕ್ಷಣೆ ನೀಡದ ಕಾಂಗ್ರೆಸ್ ಧೋರಣೆ ನಾವೆಲ್ಲರೂ ಅರಿಯಬೇಕು ಎಂದರು.ನಂತರ ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಮಾತನಾಡಿ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅಹಿಂದ್ ಹೇಸರಿನಲ್ಲಿ ಅಧಿಕಾರಕ್ಕೆ ಬಂದ ನಂತರ ಅಹಿಂದ್ ಮರೆಯುವ ಮೂಲಕ ಹಿಂದುಳಿದವರ ಮೀಸಲಾತಿ ಕಿತ್ತು ಅಲ್ಪಸಂಖ್ಯಾತರನ್ನು 2ಬಿ ಗೆ ಸೇರಿಸಲು ಹೊರಟಿದ್ದಾರೆ. ತೆರಿಗೆ ಹಣದಿಂದ ರಾಜ್ಯ ಸರ್ಕಾರದ ಗ್ಯಾರಂಟಿ ನಡೆಸುವದು ಮತ್ತು ಗಂಡನಿಂದ ಕಸಿದು ಹೆಂಡತಿ ಖಾತೆಗೆ ಗ್ಯಾರಂಟಿ ಹೆಸರಿನಲ್ಲಿ ಹಣ ಹಾಕುತ್ತಿದ್ದಾರೆ ಎಂದು ಟೀಕಿಸಿದರು.
ನಂತರ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್, ಮಾಜಿ ಶಾಸಕ ಪ್ರತಾಪ್ ಪಾಟೀಲ್, ಅಮರೇಗೌಡ ವಿರುಪಾಪುರ, ಬಸವಂತರಾಯ ಕುರಿ, ಮಾತನಾಡಿದರು. ಇದೇ ವೇಳೆ ಪಟ್ಟಣ ಸೇರಿ ವಿವಿಧ ಹಳ್ಳಿಗಳ ಮುಖಂಡ ಯುವಕರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಂಚುಣಿ ಘಟಕದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಭಾಗಿಯಾಗಿದ್ದರು.