ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಒತ್ತಾಯಿಸಿ ಬೆಂಗಳೂರು ಚಲೋ

| Published : Jul 18 2025, 12:45 AM IST

ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಒತ್ತಾಯಿಸಿ ಬೆಂಗಳೂರು ಚಲೋ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಅನೇಕ ಇಲಾಖೆಗಳಲ್ಲಿ 3 ರಿಂದ 4000 ಉದ್ಯೋಗಗಳು ಖಾಲಿ ಇದ್ದರೂ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಸೇರಿದ ನಿರುದ್ಯೋಗಿಗಳಿಗೆ ಕೆಲಸ ಇಲ್ಲದಂತಾಗಿದೆ.

ಬಂಗಾರಪೇಟೆ: ರಾಜ್ಯಾದ್ಯಂತ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡದೆ ಕಡೆಗಣಿಸಿರುವುದನ್ನು ಖಂಡಿಸಿ ಆ. 11ರಂದು ರಾಜ್ಯಾದ್ಯಂತ ಬೆಂಗಳೂರು ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ದಲಿತ ಸಮಾಜ ಸೇನೆಯ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಎಚ್ಚರಿಸಿದರು.ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಅನೇಕ ಇಲಾಖೆಗಳಲ್ಲಿ 3 ರಿಂದ 4000 ಉದ್ಯೋಗಗಳು ಖಾಲಿ ಇದ್ದರೂ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಸೇರಿದ ನಿರುದ್ಯೋಗಿಗಳಿಗೆ ಕೆಲಸ ಇಲ್ಲದಂತಾಗಿದೆ. ನಮ್ಮ ಸಮುದಾಯದ ಅನೇಕ ಬಡ ವಿದ್ಯಾರ್ಥಿಗಳು ಪದವಿಗಳನ್ನು ಪಡೆದು ಬೀದಿ ಪಾಲಾಗಿದ್ದಾರೆ. ತಕ್ಷಣ ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕೆಂದು ಒತ್ತಾಯಿಸಿದರು.

ಇದರಿಂದ ಬ್ಯಾಕ್ ಲಾಕ್ ಉದ್ಯೋಗ ಭರ್ತಿ ಮಾಡಿದ್ದಾರೆ. ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದುವರಿಯಲು ಸಾಧ್ಯವಾಗುತ್ತದೆ ಸರ್ಕಾರಗಳಿಗೆ ಅನೇಕ ಬಾರಿ ಮನವಿ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಬೃಹತ್ ಮಟ್ಟದ ಹೋರಾಟದ ಮುಖಾಂತರ ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಸರ್ಕಾರ ಹೊರ ಗುತ್ತಿಗೆ ಆಧಾರದ ಮೇಲೆ ನೌಕರರನ್ನು ತೆಗೆದುಕೊಳ್ಳುವುದು ಅವರಿಗೆ ಇಷ್ಟ ಬಂದ ಸಮಯದಲ್ಲಿ ಅವರನ್ನು ಕೆಲಸದಿಂದ ತೆಗೆದುಹಾಕುವ ಉನ್ನಾರಗಳನ್ನು ಮಾಡುತ್ತಿದ್ದಾರೆ. ಇದಕ್ಕಲ್ಲ ಬ್ರೇಕ್ ಹಾಕಲು ಬೃಹತ್ ಮಟ್ಟದ ಹೋರಾಟವನ್ನು ನಡೆಸುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಮಾಜ ಸೇನೆಯ ಸದಸ್ಯರಾದ ಅಯ್ಯಪ್ಪ, ಹಿರೇಕರಪ್ಪನಹಳ್ಳಿ ಅಶೋಕ್,ಆಟೋ ಕರ್ಣ, ಪ್ರದೀಪ್, ರವಿ, ಅರ್ಜುನ್, ರಾಜೇಶ್, ಮಿಟ್ಟಗಾನಹಳ್ಳಿ ಮಂಜು ಹಾಗೂ ಮೊದಲಾದವರು ಇದ್ದರು.