ಸಾರಾಂಶ
ಚಿಕ್ಕಮಗಳೂರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ. 12 ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರು ಚಲೋ ಚಳುವಳಿ ಹಮ್ಮಿಕೊಂಡಿದ್ದಾರೆ.
ಶಿಕ್ಷಕರ ಸಂಘದ ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ಕಿರಣ್ ಕುಮಾರ್ ಮಾಹಿತಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ. 12 ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರು ಚಲೋ ಚಳುವಳಿ ಹಮ್ಮಿಕೊಂಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ಕಿರಣ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳು ಮತ್ತು ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಭರ್ತಿ ನೀಡಬೇಕು ಎಂದು ಆಗ್ರಹಿಸಿದರು.ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಆದೇಶ ಹೊರಡಿಸಿ 1 ರಿಂದ 7 ಹಾಗೂ 1 ರಿಂದ 8 ತರಗತಿಗೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1-5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಅರ್ಹ ವಿದ್ಯಾರ್ಹತೆ ಪೂರೈಸಿದ 2014 ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆ ಆಧಾರದ ಮೇಲೆ ಪ್ರೌಢ ಶಾಲೆಗೆ ಭರ್ತಿ ಮಾಡ ಬೇಕು ಎಂದು ಆಗ್ರಹಿಸಿದ ಅವರು, ಪದವಿ ಮತ್ತು ಶಿಕ್ಷಣ ತರಬೇತಿ ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೇವಾ ಜೇಷ್ಠತೆ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕು.2017ರಲ್ಲಿ ರೂಪಿತಗೊಂಡ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿ ಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ 2016ಕ್ಕಿಂತ ಮೊದಲು ನೇಮಕಾತಿಯಾದ ಸರ್ವರಿಗೂ ಹಿಂದಿನ ಪದ್ಧತಿಯಂತೆ ಪ್ರೌಢಶಾಲೆಗಳಿಗೆ ವಿದ್ಯಾರ್ಹತೆ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿಕ್ಕಮಗಳೂರು ತಾಲೂಕು ಘಟಕದ ಪದಾಧಿಕಾರಿ ಅಜ್ಜಯ್ಯ, ಮೋಹನಾಕ್ಷಿ, ಶಶಿಧರ್, ಗುರುಮೂರ್ತಿ, ರವಿಕುಮಾರ್, ವಿಮಲ ಹಾಗೂ ರೂಪ ಉಪಸ್ಥಿತರಿದ್ದರು.ಪೋಟೋ ಫೈಲ್ ನೇಮ್ 5 ಕೆಸಿಕೆಎಂ 1