ವೈಜ್ಞಾನಿಕವಾಗಿ ಬೆಂಗಳೂರು ನಿರ್ಮಿಸಿದ ಕೆಂಪೇಗೌಡ: ಶಾಸಕ ಎ.ಮಂಜು

| Published : Jun 29 2024, 12:39 AM IST

ವೈಜ್ಞಾನಿಕವಾಗಿ ಬೆಂಗಳೂರು ನಿರ್ಮಿಸಿದ ಕೆಂಪೇಗೌಡ: ಶಾಸಕ ಎ.ಮಂಜು
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರು ನಗರವನ್ನು ವೈಜ್ಞಾನಿಕವಾಗಿ ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಧೀಮಂತ ವ್ಯಕ್ತಿಯಾಗಿದ್ದರು ಎಂದು ಶಾಸಕ ಎ.ಮಂಜು ತಿಳಿಸಿದರು. ಬೇಲೂರು ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾಡಪ್ರಭುವಿನ 515ನೇ ಜಯಂತಿ

ಅರಕಲಗೂಡು: ಬೆಂಗಳೂರು ನಗರವನ್ನು ವೈಜ್ಞಾನಿಕವಾಗಿ ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಧೀಮಂತ ವ್ಯಕ್ತಿಯಾಗಿದ್ದರು ಎಂದು ಶಾಸಕ ಎ.ಮಂಜು ತಿಳಿಸಿದರು.

ಬೆಂಗಳೂರು ನಗರವನ್ನು ವೈಜ್ಞಾನಿಕವಾಗಿ ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಧೀಮಂತ ವ್ಯಕ್ತಿಯಾಗಿದ್ದರು ಎಂದು ಶಾಸಕ ಎ.ಮಂಜು ತಿಳಿಸಿದರು. ಬೇಲೂರು ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೆಂಗಳೂರು ಮಹಾನಗರದಲ್ಲಿ ಕುಡಿಯಲು, ಕೃಷಿಗೆ ನೆರವಾಗುವಂತೆ ಕೆರೆ ಕಟ್ಟೆಗಳನ್ನು ಹಾಗೂ ವೃತ್ತಿಗಳನ್ನು ಆಧರಿಸಿ ವ್ಯಾಪಾರ ವಹಿವಾಟು ನಡೆಸಲು ಪೇಟೆಗಳನ್ನು ನಿರ್ಮಿಸಿದ್ದರು. ಕೆಂಪೇಗೌಡರ ಕನಸು ಮತ್ತು ದೂರದರ್ಶಿತ್ವದ ಫಲವಾಗಿ ಇಂದು ಬೆಂಗಳೂರು ನಗರ ವಿಶ್ವದೆಲ್ಲೆಡೆ ಗುರುತಿಸುವಂತಾಗಿದೆ. ಅಧಿಕಾರ ದೊರೆತಾಗ ಉತ್ತಮ ಕೆಲಸದ ಮೂಲಕ ಜನತೆಗೆ ಒಳಿತು ಮಾಡಬೇಕು ಎಂಬುದಕ್ಕೆ ಕೆಂಪೇಗೌಡರು ಉದಾಹರಣೆಯಾಗಿದ್ದಾರೆ ಎಂದು ಹೇಳಿದರು.

ಮಹನೀಯರ ಜಯಂತಿಗಳನ್ನು ಜಾತಿ, ಸಮುದಾಯಗಳಿಗೆ ಸೀಮಿತಗೊಳಿಸಬಾರದು. ಇವರು ಸಮಾಜಕ್ಕೆ ನೀಡಿರುವ ಕೊಡುಗೆ ಅತ್ಯಂತ ಅಮೂಲ್ಯವಾಗಿದ್ದು. ಇದನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಪ್ರಸ್ತುತ ಸಮಾಜಕ್ಕೆ ಮಹನೀಯರ ಬದುಕು ಮತ್ತು ಆದರ್ಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಯಂತಿಗಳ ಆಚರಣೆ ನಡೆದಿದೆ ಎಂದರು.

ನಿವೃತ್ತ ಪ್ರಾಂಶುಪಾಲ ಧನಂಜಯ ಅವರು ಕೆಂಪೇಗೌಡರ ಬದುಕು ಮತ್ತು ಆಡಳಿತ ಕುರಿತು ಪ್ರಧಾನ ಭಾಷಣ ಮಾಡಿದರು. ಕಾರ್ಯಕ್ರಮಕ್ಕೆ ಮುನ್ನ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆ ನಡೆಯಿತು.

ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ, ತಾಪಂ ಇಒ ಪ್ರಕಾಶ್, ಬಿಇಒ ದೆವರಾಜ್, ಪಿಎಸ್‌ಐ ಕಾಳೇಗೌಡ, ಸಿಡಿಪಿಒ ವೆಂಕಟೇಶ್, ಪಪಂ ಸದಸ್ಯರಾದ ನಿಖಿಲ್ ಕುಮಾರ್, ಕೃಷ್ಣಯ್ಯ, ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಎಚ್.ಎಸ್.ರಶ್ಮಿ, ಮುಖಂಡ ಗೋವಿಂದೇಗೌಡ ಇತರರು ಹಾಜರಿದ್ದರು.