ಬೆಂಗಳೂರು ದಕ್ಷಿಣ ಜಿಲ್ಲೆ ಕಾಂಗ್ರೆಸ್ ಸಂಭ್ರಮಾಚರಣೆ

| Published : May 24 2025, 12:24 AM IST

ಸಾರಾಂಶ

ಕನಕಪುರ: ರಾಜ್ಯ ಸಚಿವ ಸಂಪುಟದಲ್ಲಿ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿರುವುದರಿಂದ ರಾಮನಗರ ಕೇಂದ್ರದ ಜೊತೆಗೆ ಇಡೀ ಜಿಲ್ಲೆಯ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯ್ ದೇವ್ ತಿಳಿಸಿದರು.

ನಗರದ ಚನ್ನಬಸಪ್ಪ ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ಘಟಕ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ನಮ್ಮ ನಾಯಕ ಡಿ. ಕೆ. ಶಿವಕುಮಾರ್ ದೂರದೃಷ್ಟಿಯ ಆಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಇಡೀ ರಾಮನಗರ ಜಿಲ್ಲೆ ಚಿತ್ರಣವೇ ಬದಲಾಗಲಿದೆ. ಅಂತಾರಾಷ್ಟ್ರೀಯ ಹೂಡಿಕೆಯನ್ನು ಆಕರ್ಷಿಸಲು ಇದು ಸಹಕಾರಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಜಿಲ್ಲೆಯ ಅಭಿವೃದ್ಧಿ ಸಹಿಸದ ವಿರೋಧಿಗಳು ಇದರ ಬಗ್ಗೆ ಇಲ್ಲ-ಸಲ್ಲದ ಅಪಪ್ರಚಾರ ಮಾಡುತ್ತಾ ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸುತ್ತಿದ್ದು ಜಿಲ್ಲಾ ಕೇಂದ್ರ ರಾಮನಗರವೇ ಇರಲಿದ್ದು ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ

ಜಿಲ್ಲೆಯ ಜನ ವಿರೋಧಿಗಳ ಮಾತಿಗೆ ತಲೆ ಕೆಡಿಸಿಕೊಳ್ಳದೆ ನಮ್ಮ ನಾಯಕರ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.

ಗ್ಯಾರಂಜಿ ಯೋಜನೆಗಳ ತಾಲೂಕು ಅಧ್ಯಕ್ಷ ಕೆ.ಎನ್‌.ದಿಲೀಪ್‌, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಧು, ಕಸಬಾ ಅಧ್ಯಕ್ಷ ಮುತ್ತುರಾಜ್, ಮುಖಂಡರಾದ ಚಾಮರಾಜು ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 04:

ಕಾಂಗ್ರೆಸ್ ಕಾರ್ಯಕರ್ತರಿಂದ ಕನಕಪುರದ ಚನ್ನಬಸಪ್ಪ ವೃತ್ತದಲ್ಲಿ ಸಂಭ್ರಮಾಚರಣೆ.