ಸಾರಾಂಶ
ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳ ಆದೇಶದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ನಮೂನೆ-19 ರಲ್ಲಿ ಮತದಾರರ ಪಟ್ಟಿಯ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ. ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನ.25ರಿಂದ ಡಿ.10ರವರೆಗೆ ಕಾಲಾವಕಾಶವಿದೆ. ಡಿ.30ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ನೋಂದಾಯಿಸಲು ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಸಾಮಾನ್ಯ ನಿವಾಸಿ ಆಗಿರಬೇಕು. ಈ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಿರುತ್ತದೆ.
ಅರ್ಹತಾ ದಿನಾಂಕ ಹಿಂದಿನ 6 ವರ್ಷಗಳ ಅವಧಿಯ ಪೈಕಿ ಕನಿಷ್ಟ 3 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ, ಮಾನ್ಯತೆ ಹೊಂದಿರುವುದಾಗಿ ಘೋಷಿಸಲ್ಪಟ್ಟಿರುವ ಸೆಕೆಂಡರಿ ಶಾಲೆಗಿಂತ ಕಡಿಮೆ ಇಲ್ಲದ ಯಾವುದೇ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಕಾರ್ಯ ನಿರ್ವಹಿಸಿರಬೇಕು. ಸೆಕೆಂಡರಿ ಶಾಲೆ ಅಂದರೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು ಎಂದರು.ಅರೆಕಾಲಿಕ ಶಿಕ್ಷಕರಿಗಿಲ್ಲ ಅವಕಾಶ:
ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಖಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಹಾಗೂ ಪಾರ್ಟ್ ಟೈಂ'''''''' ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ನೋಂದಣಿಗೆ ಅವಕಾಶವಿರುವುದಿಲ್ಲ. ಅರ್ಜಿದಾರರು ಮೇಲೆ ತಿಳಿಸಿರುವ ಅವಧಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಂದ ದೃಢೀಕೃತ ದಾಖಲೆ, ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.ವಾಸಸ್ಥಳ ಆಧಾರದಲ್ಲಿ ನೋಂದಣಿ ಅರ್ಹತೆ:
ಮತದಾರರ ಪಟ್ಟಿ ನೋಂದಣಿಗೆ ಅರ್ಜಿದಾರರ ವಾಸಸ್ಥಳ ಅರ್ಹತೆಯಾಗಿದ್ದು, ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯ ಸ್ಥಳವು ಪರಿಗಣಿಸಲ್ಪಡುವುದಿಲ್ಲ. ಮತದಾರರ ಪಟ್ಟಿ ಸೇರ್ಪಡೆಗೆ ಕನ್ನಡ ಅಥವಾ ಅಂಗ್ಲ ಭಾಷೆಯ ನಮೂನೆ-19 ರಲ್ಲಿ ಅರ್ಜಿ ಸಲ್ಲಿಸಬಹುದು. ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುವುದರಿಂದ ಅರ್ಜಿದಾರರು 2 ಇತ್ತೀಚಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಇಲಾಖಾ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಶಿಕ್ಷಕರಿಂದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬಾಕ್ಸ್.................
ಜಿಲ್ಲೆಯಲ್ಲಿ ನಮೂನೆ-19ರ ಅರ್ಜಿಗಳನ್ನು ಸ್ವೀಕರಿಸುವ ಸ್ಥಳಗಳು:ದೊಡ್ಡಬಳ್ಳಾಪುರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ಬಿಇಒ ಕಚೇರಿ, ಮುಕ್ತಾಂಬಿಕ ರಸ್ತೆ, ವಡ್ಡರಪೇಟೆ, ಕಚೇರಿ ದೂ: 080-27622208, ಮೊ: 9480695013.
ತಹಶೀಲ್ದಾರ್ (ಗ್ರೇಡ್-2), ತಾಲೂಕು ಆಡಳಿತ ಸೌಧ, ತಾಲೂಕು ಕಚೇರಿ ರಸ್ತೆ ದೊಡ್ಡಬಳ್ಳಾಪುರ ಕಚೇರಿ ದೂ: 080-27622002, ಮೊ: 9448346792ದೇವನಹಳ್ಳಿ ತಾಲೂಕು:
ಕ್ಷೇತ್ರ ಶಿಕ್ಷಣಾಧಿಕಾರಿ, ಬಿಇಒ ಕಚೇರಿ, ಬಿ.ಬಿ ರಸ್ತೆ ಗುರು ಭವನ, ದೇವನಹಳ್ಳಿ ಕಚೇರಿ ದೂ: 080-27682384, ಮೊ: 9480695012ತಹಸೀಲ್ದಾರ್ (ಗ್ರೇಡ್-2), ತಾಲೂಕು ಆಡಳಿತ ಸೌಧ. ಬಿ.ಬಿ. ರಸ್ತೆ, ದೇವನಹಳ್ಳಿ ಕಚೇರಿ ದೂ: 080-22122999, ಮೊ: 6363263117
ಹೊಸಕೋಟೆ ತಾಲೂಕು:ಕ್ಷೇತ್ರ ಶಿಕ್ಷಣಾಧಿಕಾರಿ, ಬಿಇಒ ಕಚೇರಿ. ಮಿಷನ್ ಆಸ್ಪತ್ರೆ ರಸ್ತೆ, ಬೈರೇಗೌಡ ಪೆಟ್ರೋಲ್ ಬಂಕ್ ಹತ್ತಿರ ಹೊಸಕೋಟೆ ತಾಲೂಕು ಕಚೇರಿ ದೂ: 080-27931311 ಮೊ: 9480695014
ತಹಸೀಲ್ದಾರ್ (ಗ್ರೇಡ್-2), ತಾಲೂಕು ಆಡಳಿತ ಸೌಧ, ಹಳೆ ಬಸ್ ನಿಲ್ದಾಣ ಹತ್ತಿರ ಹೊಸಕೋಟೆ ತಾಲೂಕು ಕಚೇರಿ ದೂ: 080-27931237, ಮೊ: 9845637542ನೆಲಮಂಗಲ ತಾಲೂಕು:
ಕ್ಷೇತ್ರ ಶಿಕ್ಷಣಾಧಿಕಾರಿ ಬಿಇಒ ಕಚೇರಿ, ಗುರು ಭವನ, ನೆಲಮಂಗಲ ಬಸ್ ನಿಲ್ದಾಣ ಹತ್ತಿರ, ನೆಲಮಂಗಲ ಮೊ: 9480695015ತಹಸೀಲ್ದಾರ್ (ಗ್ರೇಡ್-2), ತಾಲೂಕು ಆಡಳಿತ ಸೌಧ, ಬಿ ಹೆಚ್ ರಸ್ತೆ, ನೆಲಮಂಗಲ ಕಚೇರಿ ದೂ:080-27722126, ಮೊ: 8147397189