ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಎಂಜಿನಿಯರ್ ಶಶಿಕುಮಾರ್ ನಿವಾಸ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ
KannadaprabhaNewsNetwork | Published : Oct 31 2023, 01:16 AM IST
ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಎಂಜಿನಿಯರ್ ಶಶಿಕುಮಾರ್ ನಿವಾಸ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ
ಸಾರಾಂಶ
ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಎಂಜಿನಿಯರ್ ಶಶಿಕುಮಾರ್ ನಿವಾಸ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ, ಮಹತ್ವದ ದಾಖಲೆಗಳು ವಶ
- ಮಹತ್ವದ ದಾಖಲೆಗಳು ವಶ ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದಾರೆಂಬ ಆರೋಪ ಕನ್ನಡಪ್ರಭ ವಾರ್ತೆ ಮದ್ದೂರು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಾರ್‍ಯನಿರ್ವಾಹಕ ಎಂಜಿನಿಯರ್ ಶಶಿಕುಮಾರ್ ಸ್ವಗ್ರಾಮ ತಾಲೂಕಿನ ತೈಲೂರು ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್.ಪಿ.ಸಂದೀಪ್ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಮಂದಿ ಅಧಿಕಾರಿಗಳ ತಂಡ ಮುಂಜಾನೆ 4.30ರ ಸುಮಾರಿಗೆ ಎಂಜಿನಿಯರ್ ಶಶಿಕುಮಾರ್‌ಗೆ ಸೇರಿದ ಮನೆ ಹಾಗೂ ತೋಟದ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನಾ ಕಾರ್‍ಯ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದಾರೆಂಬ ಆರೋಪದ ಮೇರೆಗೆ ಗ್ರಾಮದ ನಾಡಹೆಂಚಿನ ಮನೆ ಹಾಗೂ ಆಲೂರು ದೊಡ್ಡಿ ಸಮೀಪದ ತೋಟದಲ್ಲಿರುವ ಬೃಹತ್ ಬಂಗಲೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ಆಸ್ತಿ ಸ್ವಯಾರ್ಜಿ ಅಥವಾ ಪಿತ್ರಾರ್ಜಿತವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಕಾರ್‍ಯನಿರ್ವಾಹಕ ಎಂಜಿನಿಯರ್ ಶಶಿಕುಮಾರ್, ಪರಿಶಿಷ್ಟ ಜಾತಿ ಮತುತ ಪಂಗಡಕ್ಕೆ ಸೇರಿದ ಸುಮಾರು 8 ಎಕರೆ ಜಮೀನನ್ನು ಖರೀದಿ ಮಾಡುವ ಮೂಲಕ ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದಾರೆಂಬ ದೂರಿನ ಮೇಲೆ ಈ ದಾಳಿ ನಡೆದಿದೆ ಎಂದು ಗೊತ್ತಾಗಿದೆ. ದಾಖಲೆಗಳ ಪರಿಶೀಲನಾ ಕಾರ್‍ಯ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. 30ಕೆಎಂಎನ್ ಡಿ16,17 ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಕಾರ್‍ಯನಿರ್ವಾಹಕ ಎಂಜಿನಿಯರ್ ಶಶಿಕುಮಾರ್ ತೋಟದ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವುದು.