ಸಾರಾಂಶ
ಸಾಗರ: ಬಂಗಾರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಬಡವರ ಪರವಾಗಿ ಜಾರಿಗೆ ತಂದಷ್ಟು ಜನಪ್ರಿಯ ಯೋಜನೆಗಳನ್ನು ಬೇರೆ ಯಾರೂ ತರಲಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು ಜನ್ಮದಿನದ ಅಂಗವಾಗಿ ಭಾನುವಾರ ಬ್ಲಾಕ್ ಕಾಂಗ್ರೆಸ್ ಹಾಗೂ ಎಸ್.ಬಂಗಾರಪ್ಪ ಅಭಿಮಾನಿಗಳ ವತಿಯಿಂದ ಪಟ್ಟಣದ ತಾಯಿಮಗು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿ ಮಾತನಾಡಿದ ಅವರು, ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಆಶ್ರಯ, ಅಕ್ಷಯ, ಆರಾಧನಾ, ವಿಶ್ವದಂತಹ ಯೋಜನೆ ಅವಿಸ್ಮರಣೀಯವಾದದ್ದು ಎಂದರು.ಬಗರ್ ಹುಕುಂ ಮೂಲಕ ಭೂಹೀನರಿಗೆ ಭೂಮಿಭಾಗ್ಯ ಕಲ್ಪಿಸಿದ ಬಂಗಾರಪ್ಪನವರು ಗ್ರಾಮೀಣ ಕೃಪಾಂಕ ಜಾರಿಗೆ ತರುವ ಮೂಲಕ ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗ ಕಲ್ಪಿಸಿದ್ದರು. ಅವರ ಮಾರ್ಗದರ್ಶನದಲ್ಲಿ ನನ್ನಂತೆ ಅನೇಕ ಯುವ ಮುಖಂಡರು ಶಾಸಕರಾಗಿ ರಾಜಕೀಯ ರಂಗ ಪ್ರವೇಶ ಮಾಡಲು ಸಹಕಾರಿಯಾಗಿದೆ. ನನ್ನ ರಾಜಕೀಯ ಜೀವನದಲ್ಲಿ ಬಂಗಾರಪ್ಪನವರು ಗುರುಗಳು ಮಾತ್ರವಲ್ಲದೇ, ಸ್ಫೂರ್ತಿಯ ಸೆಲೆಯಾಗಿದ್ದಾರೆ ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ಮಂಡಗಳಲೆ ಗಣಪತಿ, ಮಧುಮಾಲತಿ, ಸರಸ್ವತಿ ನಾಗರಾಜ್, ಎಲ್.ಚಂದ್ರಪ್ಪ, ಸೋಮಶೇಖರ ಲ್ಯಾವಿಗೆರೆ, ರವಿಕುಮಾರ್, ಲಲಿತಮ್ಮ, ಸುರೇಶಬಾಬು, ಉಷಾ.ಎನ್, ಗಿರೀಶ್ ಕೋವಿ, ಮಹಾಬಲ ಕೌತಿ, ವಿಲ್ಸನ್, ರವೀಂದ್ರ ಸಾಗರ್, ಡಿ.ದಿನೇಶ್, ಅನ್ವರ್ ಭಾಷಾ, ನಾರಾಯಣ ಅರಮನೆಕೇರಿ, ಯಶವಂತ ಪಣಿ ಇನ್ನಿತರರು ಹಾಜರಿದ್ದರು.ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ ಗೋಪಲಕೃಷ್ಣ ಬೇಳೂರು ಪತ್ರಕರ್ತರೊಂದಿಗೆ ಮಾತನಾಡುತ್ತ ತಮ್ಮ ಮನದಿಂಗಿತವನ್ನು ಬಿಚ್ಚಿಟ್ಟರು.ನನಗೆ ಸಚಿವ ಸ್ಥಾನ ಕೊಡಿ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ ಸಚಿವ ಸ್ಥಾನ ಕೊಡದಿದ್ದರೆ ಭಿನ್ನಮತ ಇಲ್ಲ ಎಂದರು.ರಾಜ್ಯದಲ್ಲಿ ಅತಿಹೆಚ್ಚು ಸ್ಥಾನ ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಸರ್ಕಾರ ಚೆನ್ನಾಗಿ ನಡೆಯಬೇಕು ಎನ್ನುವುದು ನನ್ನ ಅಭಿಲಾಷೆ. ನನಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಹಕ್ಕೊತ್ತಾಯ ಮಂಡಿಸಿದ್ದೇನೆ. ಈಡಿಗ ಸಮುದಾಯದ ಪ್ರಮುಖರು ನನಗೆ ಸಚಿವ ಸ್ಥಾನ ಕೊಡಿ ಎಂದು ಪಕ್ಷದ ಮೇಲೆ ಒತ್ತಡ ಹೇರಬೇಕು ಎಂದು ನಾನು ಒತ್ತಾಯಿಸುವುದಿಲ್ಲ. ಒತ್ತಡ ತರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಹೇಳಿದರು.
)
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))