ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಶುಕ್ರವಾರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ವಿವಿಧ ಮುಖಂಡರೊಂದಿಗೆ ಬೃಹತ್‌ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸಂಡೂರು

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಶುಕ್ರವಾರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ವಿವಿಧ ಮುಖಂಡರೊಂದಿಗೆ ಬೃಹತ್‌ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಎಪಿಎಂಸಿ ಯಾರ್ಡ್‌ನಿಂದ ತಾಲೂಕು ಕಚೇರಿ ಸಮೀಪದ ವಿಜಯವೃತ್ತದ ವರೆಗೆ ನಡೆದ ಈ ಮೆರವಣಿಗೆಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ವಿಜಯೇಂದ್ರ ಅವರಲ್ಲದೆ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಶ್ರೀರಾಮುಲು, ಎಂ.ಪಿ.ರೇಣುಕಾಚಾರ್ಯ, ಸುನಿಲ್‌ ಕುಮಾರ್‌, ಮಾಜಿ ಸಂಸದರಾದ ಅನಿಲ್‌ ಲಾಡ್‌, ಭಗವಂತ ಖೂಬ ಇತರರು ಪಾಲ್ಗೊಳ್ಳುವ ಮೂಲಕ ಬಿಜೆಪಿ ವತಿಯಿಂದ ಭಾರೀ ಶಕ್ತಿ ಪ್ರದರ್ಶನ ನಡೆಸಲಾಯಿತು.

ನಾಮಪತ್ರ ಸಲ್ಲಿಸಿ ಮಾತನಾಡಿದ ಅಭ್ಯರ್ಥಿ ಬಂಗಾರು ಹನುಮಂತ ಅ‍ರು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿಯಾದ ನನ್ನ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸಿದ್ಧ. ಈ ಗೆಲುವು ಇತಿಹಾಸವನ್ನು ಸೃಷ್ಟಿಸಲಿದೆ ಎಂದು ತಿಳಿಸಿದರು.

------------

ಶಾಸಕ ಗಾಲಿ ಜನಾರ್ದನ ರೆಡ್ಡಿ ಮಾತನಾಡಿ, ಕ್ಷೇತ್ರದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಸಂಡೂರು ಕ್ಷೇತ್ರದಲ್ಲಿನ ಬಿಜೆಪಿ ಅಭ್ಯರ್ಥಿ ಗೆಲುವು ಪಕ್ಷದ ಮುಂದಿನ ಗೆಲುವುಗಳಿಗೆ ಮುನ್ನುಡಿ ಬರೆಯಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಈ ಹಿಂದೆ ಇದ್ದ ಬಿಜೆಪಿಯ ವೈಭವ ಮರುಕಳಿಸಲಿದೆ. ಕ್ಷೇತ್ರದಲ್ಲಿ ಯಾವುದೇ ಆಪರೇಷನ್ ಅಗತ್ಯವಿಲ್ಲ. ಕ್ಷೇತ್ರದ ಜನತೆ ಸ್ವಯಂಪ್ರೇರಿತರಾಗಿ ಮುಂದೆ ಬಂದು ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿಯಾಗಿದೆ. ಇದನ್ನು ಜನರ ಮುಂದೆ ಇಡುತ್ತಿದ್ದೇವೆ ಎಂದರು.

೨೫ಎಸ್.ಎನ್.ಡಿ೧ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಪಕ್ಷದ ಮುಖಂಡರೊಂದಿಗೆ ಚುನಾವಣಾಧಿಕಾರಿ ರಾಜೇಶಗೆ ನಾಮಪತ್ರ ಸಲ್ಲಿಸಿದರು.