ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಸಹಕಾರದೊಂದಿಗೆ ಘಟಕದ ದಶ ಸಂಭ್ರಮದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಬಿಲ್ಲವ ಸಮಾಜ ಬಾಂಧವರಿಗಾಗಿ 8 ತಂಡಗಳ ಬಿಡ್ಡಿಂಗ್ ಮಾದರಿಯ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ‘ಯುವವಾಹಿನಿ ಟ್ರೋಫಿ 2026’
ಬೆಳ್ತಂಗಡಿ: ನೊಂದ ಕುಟುಂಬಕ್ಕೆ, ಕಲಾ ಮನಸ್ಸಿಗೆ ಶಕ್ತಿ ತುಂಬುವ ಸಂಘಟನೆ ಯುವವಾಹಿನಿ ಆಗಿದ್ದು, ಇದರ ಸೇವೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇದು ದೇವರ ಸೇವೆ. ಇಂತಹ ಸಂಘಟನೆಗೆ ರಾಜಕೀಯ ನಂಟು ಬರಬಾರದು ಎಂದು ಬಂಗೇರ ಬ್ರಿಗೇಡ್ ನ ಅಧ್ಯಕ್ಷೆ ಬಿನುತತಾ ಬಂಗೇರ ಹೇಳಿದರು.
ಭಾನುವಾರ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಸಹಕಾರದೊಂದಿಗೆ ಘಟಕದ ದಶ ಸಂಭ್ರಮದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಬಿಲ್ಲವ ಸಮಾಜ ಬಾಂಧವರಿಗಾಗಿ 8 ತಂಡಗಳ ಬಿಡ್ಡಿಂಗ್ ಮಾದರಿಯ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ‘ಯುವವಾಹಿನಿ ಟ್ರೋಫಿ 2026’ ಹಾಗೂ ಮಹಿಳೆಯರಿಗೆ ಮತ್ತು ಪುರುಷರಿಗೆ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಂದರ್ಭ ಮಾತನಾಡಿದರು.ನೊಂದ ಕುಟುಂಬದ ಮಕ್ಕಳಿಗೆ ಶಿಕ್ಷಣದ ನೆರವು, ಅನಾರೋಗ್ಯ ಸಂದರ್ಭದ ನೆರವು ನೀಡಬೇಕು ಎಂದರು.
ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ ಉದ್ಘಾಟಟಿಸಿ ಶುಭ ಹಾರೈಸಿದರು.ಅಧ್ಯಕ್ಷತೆಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಮಾತನಾಡಿ ಸಮಾಜಮುಖಿ ಕಾರ್ಯದಲ್ಲಿ ಎಲ್ಲರು ಒಗ್ಗಟ್ಟಾಗಿ ಇರಬೇಕು ಎಂದರು.
ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಆಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾತನಾಡಿ ಶುಭ ಹಾರೈಸಿದರು.ತಾಲೂಕು ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ರಾಜೀವ್ ಸಾಲಿಯಾನ್ ಮುಂಡೂರು, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ ಬೆಳಾಲು, ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ವಸಂತ ಪೂಜಾರಿ, ಯುವ ವಾಹಿನಿ ವೇಣೂರು ಘಟಕದ ನಿಕಟ ಪೂರ್ವ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ, ಉಪ್ಪಿನಂಗಡಿ ಮೆಸ್ಕಾಂ ಸಹಾಯಕ ಎಂಜಿನಿಯರ್ ನಿತಿನ್ ಕೋಟೆ ಮಡಂತ್ಯಾರ್ , ಬೆಳ್ತಂಗಡಿ ಜೇಸಿಐ ಮಂಜುಶ್ರೀ ಅಧ್ಯಕ್ಷ ಜಿತೇಶ್, ಪತ್ರಕರ್ತರಾದ ಮನೋಹರ್ ಬಳಂಜ, ಜಾರಪ್ಪ ಪೂಜಾರಿ ಬೆಳಾಲು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಚಂದ್ರಶೇಖರ ಇಂದಬೆಟ್ಟು, ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ, ಉದ್ಯಮಿ ಗಣೇಶ್ ಸಾವ್ಯ, ಯುವ ವಾಹಿನಿ ಮಹಿಳಾ ಸಂಚಾಲನಾ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪಣಕಜೆ, ಯುವವಾಹಿನಿ ಘಟಕದ ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಅದೇಲು ಉಪಸ್ಥಿತರಿದ್ದರು.
ಬೆಳ್ತಂಗಡಿ ಘಟಕ ಸ್ಥಾಪಕ ಅಧ್ಯಕ್ಷ ಕೇಂದ್ರ ಸಮಿತಿಯ ಅರೋಗ್ಯ ನಿರ್ದೇಶಕ ರಾಕೇಶ್ ಮೂಡುಕೋಡಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಘಟಕದ ಮಾಜಿ ಅಧ್ಯಕ್ಷ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ವಂದಿಸಿದರು.ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿಸುತ್ತಿರುವ ಮಾಜಿ ಶಾಸಕ ಕೆ. ವಸಂತ ಬಂಗೇರರ ಪುತ್ರಿ ಬಿನುತ ಬಂಗೇರರ ಪರವಾಗಿ ಸುಜಿತಾ ವಿ. ಬಂಗೇರ ಅವರನ್ನು ಗೌರವಿಸಲಾಯಿತು. ದಶ ಸ್ಪಂದನಾ ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ಚಿಕಿತ್ಸೆಗೆ ಸಾಂತ್ವನ ನಿಧಿ ಹಸ್ತಾಂತರ ಮಾಡಲಾಯಿತು.
ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.