26, 27 ರಂದು ಬಂಜಾರ ಬುಡಕಟ್ಟು ಉತ್ಸವ

| Published : Oct 20 2023, 01:00 AM IST

ಸಾರಾಂಶ

ಚಿತ್ರದುರ್ಗ ಹೊರವಲಯದ ಎಸ್.ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಅ. 26, 27ರಂದು ಬಂಜಾರ ಬುಡಕಟ್ಟು ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದೆ ಎಂದು ಲಂಬಾಣಿ ಮಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಲಂಬಾಣಿ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮಾಹಿತಿ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಚಿತ್ರದುರ್ಗ ಹೊರವಲಯದ ಎಸ್.ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಅ. 26, 27ರಂದು ಬಂಜಾರ ಬುಡಕಟ್ಟು ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದೆ ಎಂದು ಲಂಬಾಣಿ ಮಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉತ್ಸವದಲ್ಲಿ ಅತೀ ಹಿಂದುಳಿದ ಸಮುದಾಯಗಳ ಸಮಾಲೋಚನಾ ಸಭೆ ನಡೆಯಲಿದ್ದು, ಸಮುದಾಯಗಳು ಎದುರಿಸುತ್ತಿರುವ ಕಷ್ಟ, ನಿವಾರಣೆಗೆ ಪರ್ಯಾಯ ಮಾರ್ಗದ ಬಗ್ಗೆ ಚರ್ಚಿಸಲಾಗುವುದು. ತೊಂದರೆಗೆ ಒಳಗಾದ ಸಮಾಜಗಳ ಸಂಘಟನೆಗೆ ಆದ್ಯತೆ ನೀಡಿ, ಸರ್ಕಾರದಿಂದ ಸೌಲಭ್ಯ ಕಲ್ಪಿಸಿಕೊಡು ಉದ್ದೇಶ ಹೊಂದಲಾಗಿದೆ. ರಾಜ್ಯದೆಲ್ಲೆಡೆ ಉತ್ತಮ ಮಳೆ-ಬೆಳೆಯಾಗಲೆಂದು ಪ್ರಾರ್ಥಿಸಿ ಲೋಕಕಲ್ಯಾಣಾರ್ಥ ಸಾಮೂಹಿಕ ಸಂಕಲ್ಪ ಪೂಜೆ ಹಮ್ಮಿಕೊಳ್ಳಲಾಗಿದೆ. ಬಿ.ಕೆ.ಹರಿಪ್ರಸಾದ್, ಸತೀಶ್ ಜಾರಕಿಹೊಳಿ ಸೇರಿ ಹಿಂದುಳಿದ ವರ್ಗಗಳ ಅನೇಕ ನಾಯಕರು, ಮಠಾಧೀಶರು, ಆನಂದ ಗುರೂಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಲಂಬಾಣಿ ಸಮಾಜದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಹಾಗೂ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಒತ್ತಾಯಿಸಲಾಗುವುದು ಎಂದರು.ಮುಖಂಡ ಮಂಜುನಾಥ್ ನಾಯ್ಕ್ ಮಾತನಾಡಿ, ದೇಶದಲ್ಲಿ ಸಂಸ್ಕೃತಿ ಉಳಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿದ್ದೇವೆ. ಹೀಗಿದ್ದರೂ ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಸಮಾಜವನ್ನು ದೂರವಿಡುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು. ಲಂಬಾಣಿ ಸಮಾಜದ ಮುಖಂಡರಾದ ಕೆ.ಜಿ.ಪುರುಷೋತ್ತಮ ನಾಯ್ಕ್, ನಾಗರಾಜ್ ನಾಯ್ಕ್, ರಘು ಜೋಗಿಮಟ್ಟಿ, ವಕೀಲ ಪ್ರತಾಪ್ ಜೋಗಿ ಇದ್ದರು. ----------------