ವರದಕ್ಷಿಣೆ ಕಿರುಕುಳಕ್ಕೆ ನೊಂದುಬ್ಯಾಂಕ್‌ ಕ್ಯಾಷಿಯರ್‌ ಆತ್ಮ*ತ್ಯೆ

| N/A | Published : Sep 02 2025, 02:00 AM IST

ವರದಕ್ಷಿಣೆ ಕಿರುಕುಳಕ್ಕೆ ನೊಂದುಬ್ಯಾಂಕ್‌ ಕ್ಯಾಷಿಯರ್‌ ಆತ್ಮ*ತ್ಯೆ
Share this Article
  • FB
  • TW
  • Linkdin
  • Email

ಸಾರಾಂಶ

ಗಂಡನ ಕಿರುಕುಳದಿಂದ ಮನನೊಂದು ಗೃಹಿಣಿಯೊಬ್ಬರು ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ.

 ಪೀಣ್ಯ ದಾಸರಹಳ್ಳಿ:  ಗಂಡನ ಕಿರುಕುಳದಿಂದ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ.ಪೂಜಶ್ರೀ (28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮನೆಯವರ ನಿಶ್ಚಯದಂತೆ ಪೂಜಶ್ರೀ ಅವರ ವಿವಾಹ ಮೂರು ವರ್ಷದ ಹಿಂದೆ ನಂದೀಶ್ ಎಂಬುವರ ಜೊತೆ ಆಗಿದ್ದು ಹೆಣ್ಣು ಮಗುವಿದೆ. ನಂದಿಶ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಪೂಜಶ್ರೀ ಖಾಸಗಿ ಬ್ಯಾಂಕ್ ನಲ್ಲಿ ಕ್ಯಾಶಿಯರ್ ಆಗಿದ್ದರು. ಈ ನಡುವೆ ಪತಿ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರುವ ವಿಚಾರ ಗೊತ್ತಾಗಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.

ರಾಜೀ ಪಂಚಾಯಿತಿ:

ಇತ್ತೀಚೆಗೆ ನಂದೀಶ್ ತವರು ಮನೆಯಿಂದ ವರದಕ್ಷಿಣೆ ಹಣ ತರುವಂತೆ ಜಗಳ ಶುರು ಮಾಡಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಎರಡು ಮೂರು ಬಾರಿ ಹಿರಿಯರ ಸಮ್ಮುಖದಲ್ಲಿ ರಾಜೀ ಪಂಚಾಯಿತಿ ನಡೆದಿತ್ತು. ಈ ವೇಳೆ ನಾನು ಪತ್ನಿಗೆ ಕಿರುಕುಳ ನೀಡುವುದಿಲ್ಲ ಎಂದು ನಂದೀಶ್ ಭರವಸೆ ನೀಡಿದ್ದ.

ಮೂರು ದಿನಗಳ ಹಿಂದೆ ಮತ್ತೆ ಜಗಳ ಮಾಡಿ ನಂದೀಶ್ ಹಲ್ಲೆ ಮಾಡಿದ್ದ. ಪತಿಯ ಕಿರುಕುಳ ತಾಳಲಾರದೇ ಪೂಜಶ್ರೀ ತವರು ಮನೆಗೆ ಬಂದಿದ್ದರು. ಈ ವಿಚಾರ ತಿಳಿದು ನಂದೀಶ್ ಅತ್ತೆ ಮನೆಗೆ ಬಂದು ಕಥೆ ಕಟ್ಟಿ ಮತ್ತೆ ಪತ್ನಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆದರೆ ಶನಿವಾರ ರಾತ್ರಿ ಪೂಜಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದಡಿ ಕೇಸ್ ದಾಖಲಾಗಿದೆ. ಪತಿ ನಂದೀಶ್ ನನ್ನು ಬಂಧಿಸಿ ವಿಚಾರಣೆ ನಡೆಯುತ್ತಿದೆ.

Read more Articles on