ಉಡುಪಿ: ನಗರದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಏ. 16 ರಿಂದ 20 ರವರೆಗೆ ‘ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವ ವೈಭವ-2026’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯೊಂದಿಗೆ ದೇವಸ್ಥಾನದ ಪ್ರಸಾದವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಡಿ ಅಧಿಕೃತವಾಗಿ ಆಹ್ವಾನಿಸಲಾಯಿತು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ದೇವಸ್ಥಾನದ ಅರ್ಚಕ ಮಧುಸೂಧನ್ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುದೇಶ್ ಶೇಟ್, ಪ್ರಭಾಕರ್ ಶೆಟ್ಟಿ, ರಾಜೇಶ್ ಬನ್ನಂಜೆ, ಶೇಖರ್ ಶೆಟ್ಟಿ, ವಿದ್ಯಾಲತಾ ಯು. ಶೆಟ್ಟಿ, ಶಮಿತಾ ಎಸ್. ಭಂಡಾರಿ, ಮೀನಾಕ್ಷಿ ಮಾಧವ ಬನ್ನಂಜೆ ಇದ್ದರು.