ಸಾರಾಂಶ
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷರಾಗಿ ಬನಶಂಕರಿ ರಘು ಮತ್ತು ರಾಣಿ ಕೃಷ್ಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಗುರುವಾರ ಚುನಾವಣಾಧಿಕಾರಿ ನವೀನ್ ಕುಮಾರ್ ತಿಳಿಸಿದ್ದಾರೆ.ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿ, ಒಟ್ಟು ೨೩ ಜನ ಸದಸ್ಯರ ಒಳಗೊಂಡಂತೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯು ನಡೆಯಿತು. ಅದರಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಬನಶಂಕರಿ ರಘು ಇವರು ಒಂದೇ ನಾಮಪತ್ರ ಸಲ್ಲಿಕೆ ಆಗಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಬನಶಂಕರಿ ರಘು ಅವರು ಆಯ್ಕೆಯಾಗಿದ್ದಾರೆ ಹಾಗೂ ಅದರಂತೆ ಉಪಾಧ್ಯಕ್ಷರ ಸ್ಥಾನಕ್ಕೆ ರಾಣಿ ಕೃಷ್ಣ ಒಬ್ಬರೇ ನಾಮಪತ್ರವನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಅವರು ಕೂಡ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ೧೮ ತಿಂಗಳಿನಿಂದ ಪುರಸಭೆಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ಇರುವ ಹಿನ್ನೆಲೆಯಲ್ಲಿ ಗುರುವಾರ ಚುನಾವಣೆ ಪ್ರಕ್ರಿಯೆ ನಡೆದಿದ್ದು ಈ ಪ್ರಕ್ರಿಯೆಯಲ್ಲಿ ಅಧ್ಯಕ್ಷರ ಸ್ಥಾನ ಮತ್ತು ಉಪಾಧ್ಯಕ್ಷರ ಸ್ಥಾನವು ಕೂಡ ಏಕ ನಾಮಪತ್ರ ಸಲ್ಲಿಕೆ ಆಗಿರುವ ಹಿನ್ನೆಲೆ, ಅಭ್ಯರ್ಥಿಗಳನ್ನು ಅಧ್ಯಕ್ಷರುಗಳಾಗಿ ಮತ್ತು ಉಪಾಧ್ಯಕ್ಷರಾಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.