ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕೆಇಎ - ಸಿಇಟಿ 2026 ಪ್ರವೇಶ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಬಂಟಕಲ್ಲು: ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕೆಇಎ - ಸಿಇಟಿ 2026 ಪ್ರವೇಶ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಕೆಇಎ- ಸಿಇಟಿ 2026ರ ಪ್ರವೇಶ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಯ್ಕೆ ನಮೂದು (ಆಪ್ಷನ್ ಎಂಟ್ರಿ) ಸೀಟು ಹಂಚಿಕೆ (ಸೀಟ್ ಅಲಾಟ್‌ನಮಂಟ್), ಶುಲ್ಕ ಪಾವತಿ (ಫೀ ಪೇಮೆಂಟ್) ಹಾಗೂ ಕಾಲೇಜಿಗೆ ವರದಿ ಮಾಡುವ ಪ್ರಕ್ರಿಯೆ ಸೇರಿದಂತೆ ಸಿಇಟಿ ಪ್ರವೇಶ ಸಂಬಂಧಿತ ವಿವಿಧ ಹಂತಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು.ಕಾರ್ಯಕ್ರಮವು ಜೂ. 12ರಂದು ಬೆಳಿಗ್ಗೆ 9.30 ಗಂಟೆಗೆ ಕುಕ್ಕುಂದೂರು ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಜೂ. 13ರಂದು ಮಧ್ಯಾಹ್ನ 2 ಗಂಟೆಗೆ , ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು, ಜೂ. 18ರಂದು ಬೆಳಿಗ್ಗೆ 9.30ಕ್ಕೆ ಬಂಟಕಲ್ ಎಸ್‌ಎಂವಿಐಟಿಎಂ ಕಾಲೇಜಿನಲ್ಲಿ ನಡೆಯಲಿದೆ. ವೃತ್ತಿಪರ ಹಾಗೂ ಎಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಬಯಸುವ ಕೆಇಎ - ಸಿಇಟಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯುವಂತೆ ಎಸ್‌ಎಂವಿಐಟಿಎಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ೯೬೧೧೬೧೫೦೦೧, ೦೮೨೦-೨೫೮೯೧೮೩ ನ್ನು ಸಂಪರ್ಕಿಸಬಹುದು