ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

| Published : Aug 24 2024, 01:21 AM IST

ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನದ ವೇಲೆ ಯಾವೊಬ್ಬ ಅರ್ಹ ಫಲಾನುಭವಿಗೂ ವಂಚನೆಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ತಾಲೂಕು ಮಟ್ಟದಲ್ಲಿಯೂ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯನ್ನು ರಚಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಬಿ.ಸಿ. ರೋಡಿನ ತಾಲೂಕು ಪಂಚಾಯಿತಿ ಕಟ್ಟಡದಲ್ಲಿ ಶುಕ್ರವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಚೇರಿಯನ್ನು ಉದ್ಘಾಟಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಮಾತನಾಡಿ, ತಾಲೂಕಿನಲ್ಲಿ ಬಾಕಿಯಿರುವ ಗ್ಯಾರಂಟಿ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಅರ್ಹ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ಸಿಗುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಪಂಚ ಗ್ಯಾರಂಟಿ ಯೋಜನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ, ಗೃಹಲಕ್ಷ್ಮೀ ಯೋಜನೆ ಶೇ.೯೩ರಷ್ಟು ಅನುಷ್ಠಾನಗೊಂಡಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಮೇಳಗಳನ್ನು ಆಯೋಜಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಬಂಟ್ವಾಳ ಪುರಸಭಾ ಅಧ್ಯಕ್ಷ ಬಿ. ವಾಸು ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್‌, ಪ್ರಮುಖರಾದ ಪದ್ಮರಾಜ್‌ ಆರ್‌. ಪೂಜಾರಿ, ಪಿಯೂಸ್ ಎಲ್.ರೋಡ್ರಿಗಸ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಎಂ‌.ಎಸ್.ಮಹಮ್ಮದ್, ಮಲ್ಲಿಕಾ ಶೆಟ್ಟಿ, ಚಂದ್ರಶೇಖರ ಭಂಡಾರಿ, ಜೆಸಿಂತಾ ಡಿ.ಸೋಜ, ಅಬ್ಬಾಸ್ ಆಲಿ, ವಾಸುಪೂಜಾರಿ, ಅಶ್ವನಿ ಕುಮಾರ್ ರೈ,ಸುದರ್ಶನ ಜೈನ್, ಸಂಜೀವ ಪೂಜಾರಿ, ಮಾಯಿಲಪ್ಪ ಸಾಲ್ಯಾನ್,ಸುರೇಶ್ ಕುಲಾಲ್ ನಾವೂರ, ಶೋಬಿತ್ ಪೂಂಜಾ, ಹಾಗೂ ಬಂಟ್ವಾಳ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸುದೀಂದ್ರ ಶೆಟ್ಟಿ, ಮಹಮ್ಮದ್ ಸಿರಾಜ್ ಎಂ.ಯು. ಸತೀಶ್ , ಮುರಳೀಧರ್ ವೈ, ವಿನಯಕುಮಾರ್, ಕಾಂಚಲಾಕ್ಷಿ, ಐಡಾ ಸುರೇಶ್, ಹರ್ಷನ್ ಬಿ.ಪವಿತ್ರ, ಚಂದ್ರಶೇಖರ ಆಚಾರ್ಯ, ಅಬ್ದುಲ್ ಮಜೀದ್, ಜನಾರ್ದನ ಸಪಲ್ಯ, ಕೃಷ್ಣಪ್ಪ ಪೂಜಾರಿ, ಎನ್.ಅಬ್ದುಲ್ ಕರೀಂ ಉಪಸ್ಥಿತರಿದ್ದರು. ತಾ.ಪಂ. ಇ.ಒ. ಸಚಿನ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.