ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದ ಆರೋಪಿ ಸೆರೆ

| Published : Mar 30 2024, 12:47 AM IST

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದ ಆರೋಪಿ ಸೆರೆ
Share this Article
  • FB
  • TW
  • Linkdin
  • Email

ಸಾರಾಂಶ

ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ 2, ಕೇರಳ ಮಂಜೇಶ್ವರ ಠಾಣೆಯಲ್ಲಿ 1̧ ಪುತ್ತೂರು ನಗರ ಠಾಣೆಯಲ್ಲಿ 1 ಹಾಗೂ ವಿಶಾಖಪಟ್ಟಣ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ, ಕೇರಳ ಮೂಲದ ಇಬ್ರಾಹಿಂ ಮುಜಾಂಬಿಲ್ (28) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಾಯರುಪದವು ನಿವಾಸಿಯಾಗಿರುವ ಮುಜಾಂಬಿಲ್‌ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆತನನ್ನು ವಿಟ್ಲ ಪೊಲೀಸರ ತಂಡ ಪುತ್ತೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿತು. ನ್ಯಾಯಾಲಯವು ಆರೋಪಿಗೆ ಏ.8ರ ವರೆಗೆ ನ್ಯಾಯಾಂಗ ಬಂಧನ ನೀಡಿದೆ. ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ 2, ಕೇರಳ ಮಂಜೇಶ್ವರ ಠಾಣೆಯಲ್ಲಿ 1̧ ಪುತ್ತೂರು ನಗರ ಠಾಣೆಯಲ್ಲಿ 1 ಹಾಗೂ ವಿಶಾಖಪಟ್ಟಣ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.ಕಾರು ಡಿಕ್ಕಿ: ತಮಿಳುನಾಡು ಮೂಲದ ವ್ಯಕ್ತಿ ಸಾವುಉಪ್ಪಿನಂಗಡಿ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ತಮಿಳುನಾಡು ಮೂಲದ ಪಾರ್ಥಸಾರಥಿ ಊವರಾಜ್ (೨೯) ಎಂಬವರು ಮೃತಪಟ್ಟಿರುವ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿ ಯ ಅಲಂಕಾರು ಗ್ರಾಮದ ಶರವೂರು ಎಂಬಲ್ಲಿ ಗುರುವಾರ ಸಂಭವಿಸಿದೆ. ಈ ಬಗ್ಗೆ ದಿನೇಶ್ ಕುಮಾರ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ತನ್ನ ಬೋರ್‌ವೆಲ್‌ ಲಾರಿ ವಾಹನದ ರಿಪೇರಿಗಾಗಿ ಬಂದಿದ್ದ ತಮಿಳುನಾಡಿನ ಪಾರ್ಥಸಾರಥಿ ಊವರಾಜ್ ಗುರುವಾರ ಸಂಜೆ ಶರವೂರು ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕನ ಅಜಾಗರೂಕತೆಯ ಚಾಲನೆಯಿಂದ ಕಾರು ಡಿಕ್ಕಿ ಆತನಿಗೆ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಪಾರ್ಥಸಾರಥಿಯನ್ನು ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು, ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಅಕ್ರಮವಾಗಿ ಜಾನುವಾರು ವಧೆ, ಮಾಂಸ ತಯಾರಿ: ಓರ್ವನ ಬಂಧನಉಪ್ಪಿನಂಗಡಿ: ಕಡಬ ತಾಲೂಕು ಕೊಯಿಲ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ ಇಲ್ಯಾಸ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನವನ್ನು ಹತ್ಯೆ ಮಾಡಿ, ಮಾಂಸ ಮಾಡುತ್ತಿರುವ ಕೃತ್ಯವನ್ನು ಕಡಬ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿ ಇಲ್ಯಾಸ್‌ನನ್ನು ಬಂಧಿಸಿದ್ದಾರೆ. ಇನ್ನೊಬ್ಬ ಪರಾರಿಯಾಗಿದ್ದಾನೆ. ಖಚಿತ ಮಾಹಿತಿ ಮೇರೆಗೆ ಕಡಬ ಪೊಲೀಸ್‌ ಠಾಣಾ ಪಿಎಸ್‌ಐ ಅಭಿನಂದನ್ ಎಂ.ಎಸ್. ಹಾಗೂ ಸಿಬ್ಬಂದಿ ದಾಳಿ ಮಾಡಿದ ವೇಳೆ ಆರೋಪಿಗಳಾದ ಇಲ್ಯಾಸ್ ಮತ್ತು ಮಹಮ್ಮದ್ ಆಮು ಪರವಾಗನಗಿ ಇಲ್ಲದೆ ಜಾನುವಾರುಗಳ ವಧೆ ಮಾಡುತ್ತಿರುವುದು ಕಂಡು ಬಂದಿದ್ದು, ಸ್ಥಳದಲ್ಲಿದ್ದ ಜಾನುವಾರುಗಳ ಮಾಂಸ ಹಾಗೂ ಜಾನುವಾರು ವಧೆಗೆ ಬಳಸಿದ ಸೊತ್ತುಗಳನ್ನು ವಶಪಡಿಸಲಾಗಿದೆ. ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.