ಬಂಟ್ವಾಳ: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

| Published : Jul 02 2025, 12:24 AM IST / Updated: Jul 02 2025, 12:25 AM IST

ಬಂಟ್ವಾಳ: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ನಡೆಯಿತು. ತಹಸೀಲ್ದಾರ್ ಅರ್ಚನಾ ಭಟ್ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಬಂಟ್ವಾಳಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ನಡೆಯಿತು.

ಕೆಂಪೇಗೌಡರ ಭಾವಚಿತ್ರಕ್ಕೆ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಹಾಗೂ ತಹಸೀಲ್ದಾರ್ ಡಿ.ಅರ್ಚನಾ ಭಟ್ ಅವರು ಪುಷ್ಪಾರ್ಚನೆಗೈದರು.ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಅರ್ಚನಾ ಭಟ್ ಮಾತನಾಡಿ, ದೂರದೃಷ್ಟಿಯ ಚಿಂತನೆಯ ವ್ಯಕ್ತಿಯಾಗಿದ್ದ ಕೆಂಪೇಗೌಡರ ಕಾಲದಲ್ಲಿ ರೂಪುಗೊಂಡು ಬೆಂಗಳೂರು ನಗರ ಇಂದು ಹೆಮ್ಮರವಾಗಿ ಬೆಳೆಯತೊಡಗಿತು ಎಂದರು.ಜನರನ್ನು ಒಂದಾಗಿ ಕೊಂಡು ಹೋಗುವ ಜೊತೆಗೆ ಸುಸ್ಥಿರತೆಯನ್ನು ತರುವಲ್ಲಿ ಅವರ ಪಾತ್ರ ಬಹಳ ದೊಡ್ಡದಾಗಿತ್ತು ಅದನ್ನು ಇಂದು ನೆನಪು ಮಾಡಿಕೊಳ್ಳಬೇಕಾಗಿದೆ. ನಿಸರ್ಗ ಪ್ರೇಮಿಯಾಗಿದ್ದ ಗೌಡರು ಕೃಷಿ ಬಗ್ಗೆ ಅಪಾರ ಆಸಕ್ತಿವುಳ್ಳರಾಗಿದ್ದರು ಎಂದರು.ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಹಾಗೂ ತಹಸೀಲ್ದಾರ್ ಅರ್ಚನಾ ಭಟ್ ಅವರು ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪದ್ಮನಾಭ ಗೌಡ ಅವರು ನಾಡಪ್ರಭು ಕೆಂಪೇಗೌಡರ ಬಗ್ಗೆ ಮಾಹಿತಿ ನೀಡಿದರು. ಬೂಡ ಅಧ್ಯಕ್ಷ ಬೇಬಿಕುಂದರ್ ಕಾರ್ಯಕ್ರಮದ ಕುರಿತು ಮಾತನಾಡಿದರು. ಗೌಡರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಅಮಿತಾಕೃಷ್ಣ, ಪುರಸಭಾ ಸದಸ್ಯೆ ಮೀನಾಕ್ಷಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೃಷಿಕ ನೀಲಪ್ಪ ಗೌಡ ಅವರನ್ನು ಸನ್ಮಾನಿಸಲಾಯಿತು. ಶಿರಸ್ತೇದಾರ್ ಎಂ ಶ್ರೀ ನಿಧಿ, ಉಪತಹಸೀಲ್ದಾರ್ ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ಶಿವಪ್ರಸಾದ್ ಕಂದಾಯ ನಿರೀಕ್ಷಕ ವಿಜಯ್. ಆರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಕಾರ್ಯಕ್ರಮದಲ್ಲಿ ಹಾಜರಿದ್ದರು.