ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

| Published : Feb 21 2025, 12:45 AM IST

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ
Share this Article
  • FB
  • TW
  • Linkdin
  • Email

ಸಾರಾಂಶ

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಅಭಿನಂದನಾ ಮಾತುಗಳನ್ನಾಡಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಪ್ರಾಮಾಣಿಕತೆ ಮತ್ತು ಬದ್ಧತೆಯಲ್ಲಿ ಕೆಲಸ ಮಾಡಿದಾಗ ಜನರು ನೆನೆಪಿಟ್ಟುಕೊಳ್ಳುತ್ತಾರೆ ಎಂಬುದಕ್ಕೆ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಚುನಾವಣೆಯ ಫಲಿತಾಂಶವೇ ಸಾಕ್ಷಿಯಾಗಿದೆ. ಚುನಾವಣೆಯಲ್ಲಿ ಎಲ್ಲಾ ನಿರ್ದೇಶಕರಿಗೆ ಮತ ನೀಡಿ ಮೂರನೇ ಬಾರಿಗೆ ಅಭೂತಪೂರ್ವ ಗೆಲವು ಸಾಧಿಸಲು ಸಹಕಾರ ನೀಡಿದ ಮತದಾರರಿಗೆ ಅಭಿನಂದನೆಗಳು ಎಂದು ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಹೇಳಿದ್ದಾರೆ.

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.

ಬ್ಯಾಂಕ್ ಸ್ಥಾಪಕ ದಿ. ಅಮ್ಮೆಂಬಳ ಬಾಳಪ್ಪ ಅವರ ಸಹಕಾರಿ ಕ್ಷೇತ್ರದ ಕನಸುಗಳನ್ನು ಸುರೇಶ್ ಕುಲಾಲ್ ತಂಡ ನನಸು ಮಾಡಿದೆ ಎಂದು ಹೇಳಿದರು.

ಸಮಾಜದಲ್ಲಿ ಸಂಸ್ಥೆ ಬೆಳೆದಾಗ ಅಂತಹ ಸಂಸ್ಥೆಗಳ ಮೇಲೆ ಕಣ್ಣು ಬೀಳುವುದು ಸಹಜ, ಹಾಗಾಗಿ ಜಾಗ್ರತೆ ಹಾಗೂ ಜವಬ್ದಾರಿಯಿಂದ ವ್ಯವಹಾರ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಸಂಸ್ಥೆಯ ಮೇಲೆ ಪ್ರೀತಿ ವಿಶ್ವಾಸವನ್ನು ಉಳಿಸಿಕೊಂಡು ಸರ್ವರಿಗೂ ಸೇವೆ ನೀಡಿ ಎಂದು ತಿಳಿಸಿದರು.

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕರುಣೇಂದ್ರ ಪೂಜಾರಿ, ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಬಂಟ್ವಾಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್, ಉಪಾಧ್ಯಕ್ಷ ಜನಾರ್ದನ ಬೊಂಡಾಲ, ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲಿಯಾನ್ ಇದ್ದರು.