ಬಂಟ್ವಾಳ: ಯಕ್ಷಧ್ರುವ ಫೌಂಡೇಶನ್ ದ್ವಿತೀಯ ವರ್ಷದ ವಾರ್ಷಿಕೋತ್ಸವ

| Published : Mar 29 2025, 12:35 AM IST

ಬಂಟ್ವಾಳ: ಯಕ್ಷಧ್ರುವ ಫೌಂಡೇಶನ್ ದ್ವಿತೀಯ ವರ್ಷದ ವಾರ್ಷಿಕೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು, ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ದ್ವಿತೀಯ ವಾರ್ಷಿಕೋತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ವಠಾರದಲ್ಲಿ ಗುರುವಾರ ಸಂಜೆ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು, ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ದ್ವಿತೀಯ ವಾರ್ಷಿಕೋತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ವಠಾರದಲ್ಲಿ ಗುರುವಾರ ಸಂಜೆ ನಡೆಯಿತು.

ಈ ಸಂದರ್ಭ ಯಕ್ಷರಂಗದ ಮೇರುಕಲಾವಿದ ದಶಾವತಾರಿ ಖ್ಯಾತಿಯ ಕೆ.ಗೋವಿಂದ ಭಟ್ ಸೂರಿಕುಮೇರು ಹಾಗೂ ರಂಗಭೂಮಿಯ ಹಿರಿಯ ಕಲಾವಿದ ಡಿ.ಎಸ್.ಬೋಳೂರು ಅವರನ್ನು ಸನ್ಮಾನಿಸಲಾಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಸನ್ಮಾನ ಕಾರ್ಯ ನೆರವೇರಿಸಿ ಮಾತನಾಡಿ ಕಲೆ, ಸಂಸ್ಕೃತಿ ಉಳಿವಿಗೆ ಯಕ್ಷಗಾನ ಕರಾವಳಿಯಲ್ಲಿ ಮಹತ್ತರ ಕೊಡುಗೆ ನೀಡಿದ್ದು, ಪಟ್ಲ ಫೌಂಡೇಶನ್ ಕಾರ್ಯ ಸ್ತುತ್ಯರ್ಹ ಎಂದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ, ಭಾಗವತ ಪಟ್ಲ ಸತೀಶ್ ಶೆಟ್ಟಿ, ಬಂಟ್ವಾಳ ಘಟಕದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಸಂಚಾಲಕ ಭುವನೇಶ್ ಪಚ್ಚಿನಡ್ಕ, ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಉಪಾಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಭುಜಂಗ ಸಾಲಿಯಾನ್, ಜಯಪ್ರಕಾಶ್, ಕೋಶಾಧಿಕಾರಿ ಶಂಕರ ಶೆಟ್ಟಿ ಪರಾರಿ ಉಪಸ್ಥಿತರಿದ್ದರು.

ಈ ಸಂದರ್ಭ ಕಾರ್ಯದರ್ಶಿ ಮೋಹನದಾಸ ಕೊಟ್ಟಾರಿ ಹಾಗೂ ಪತ್ರಕರ್ತ, ಕಲಾವಿದ ರತ್ನದೇವ ಪುಂಜಾಲಕಟ್ಟೆ ಸನ್ಮಾನಿತರ ವಿವರ ನೀಡಿದರು. ಪ್ರಧಾನ ಕಾರ್ಯದರ್ಶಿ ಬಿ.ದೇವದಾಸ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಇದೇ ವೇಳೆ ಪಾವಂಜೆ ಮೇಳದಿಂದ ಭಾರತ ವರ್ಷಿಣಿ ಯಕ್ಷಗಾನ ಪ್ರದರ್ಶನ ನಡೆಯಿತು.