ಜ್ವರದಿಂದ ಬಳಲುತ್ತಿದ್ದ ಯುವಕ ಸಾವು

| Published : Jul 26 2024, 01:34 AM IST

ಸಾರಾಂಶ

ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಇವರಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕ್ಯಾನಿಕ್‌ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃತರು.

ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಇವರಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ. ಡ್ರಗ್ಸ್‌ ಸೇವನೆ: ಐವರ ಬಂಧನ

ಮಂಗಳೂರು: ಮಾದಕ ದ್ರವ್ಯದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಮಂಗಳೂರು ಪೊಲೀಸರು ಡ್ರಗ್ಸ್‌ ಸೇವನೆ ಮಾಡಿರುವ ಮತ್ತೆ ಐದು ಮಂದಿಯನ್ನು ಬಂಧಿಸಿದ್ದಾರೆ.ಜು.21ರಂದು ರಾತ್ರಿ ಡ್ರಗ್ಸ್‌ ಸೇವಿಸಿ ಕುಂಟಿಕಾನದಲ್ಲಿದ್ದ ಕದ್ರಿಯ ಅಪಾರ್ಟ್‌ಮೆಂಟ್‌ವೊಂದರ ನಿವಾಸಿ ಅನೂಪ್‌ ಕುಮಾರ್‌(45)ನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಜು.22ರಂದು ಸಂಜೆ ಲೇಡಿಹಿಲ್‌ನಲ್ಲಿ ಸಾರ್ವಜನಿಕರ ರಸ್ತೆ ಬದಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಮಹಮ್ಮದ್‌ ಇಕ್ಬಾಲ್‌ ಮತ್ತು ಸಾಹುಲ್‌ ಹಮೀದ್‌ ದಾವುದ್‌ನನ್ನು ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜು.22ರಂದು ಬೆಳಗ್ಗೆ ಕುಂಜತ್ತಬೈಲ್‌ ಜಂಕ್ಷನ್‌ ಬಳಿ ಗಾಂಜಾ ಸೇವನೆ ಮಾಡಿರುವ ಮೌಲಾಲಿ(26) ಎಂಬಾತನನ್ನು, ಜು.22ರಂದು ಕೊಂಚಾಡಿ ಬಳಿ ಸಂಜೆ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಮಣ್ಣಗುಡ್ಡೆಯ ರಿತೇಶ್‌(25)ನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ಪ್ರಕರಣವೊಂದರಲ್ಲಿ ಕಂಕನಾಡಿ ನಗರ ಠಾಣಾ ಪೊಲೀಸರು ಜು.21ರಂದು ಬಂಧಿಸಿದ ಆರೋಪಿ ಅಂಕಿತ್‌ನನ್ನು ವಿಚಾರಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.