ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಎಚ್. ಹೇಳಿದ್ದಾರೆ.
ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಎಚ್. ಹೇಳಿದ್ದಾರೆ.
ಬಂಟ್ವಾಳದ ಬಿ.ಸಿ.ರೋಡಿನಲ್ಲಿರುವ ಸಮ್ಮೇಳನ ಸ್ವಾಗತ ಸಮಿತಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ಶ್ರೀ ಶಾರದಾ ಪ್ರೌಢಶಾಲೆ ಬಳಿಯಿಂದ ಸಮ್ಮೇಳನ ಸಭಾಂಗಣದ ತನಕ ನಡೆಯಲಿರುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿ ಗೌರವ ಸಲಹೆಗಾರ ಹಾಜಿ ಪಿ. ಮುಹಮ್ಮದ್ ರಫೀಕ್ ಉದ್ಘಾಟಿಸಲಿದ್ದು, ಬೆಳಗ್ಗೆ 10ಕ್ಕೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಧ್ವಜಾರೋಹಣ ನೆರವೇರಿಸುವರು. ಬೆಳಗ್ಗೆ 10.30ಕ್ಕೆ ಕರ್ನಾಟಕ ವಿಧಾನಸಭಾಧ್ಯಕ್ಷ ಡಾ. ಯು.ಟಿ. ಖಾದರ್ ಫರೀದ್ ಸಮ್ಮೇಳನ ಉದ್ಘಾಟಿಸಲಿದ್ದು, ಹಿರಿಯ ಕವಿ, ಗಾಯಕ ರಹೀಂ ಬಿ.ಸಿ.ರೋಡು ಸಮ್ಮೇಳನಾಧ್ಯಕ್ಷರ ಭಾಷಣ ಮಾಡುವರು ಎಂದರು.ಶಾಸಕ ಯು. ರಾಜೇಶ್ ನಾಯ್ಕ್, ಉಮೈರತ್ ಕುಮೇರ್ ಅವರ ಬೈಲ್ ಮಲೆ (ಬ್ಯಾರಿ ಕಥಾ ಸಂಕಲನ) ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ದ.ಕ. ಜಿಪಂ ಮಾಜಿ ಉಪಾಧ್ಯಾಕ್ಷ ಎಂ.ಎಸ್. ಮುಹಮ್ಮದ್, ಮೊಹಿದ್ದಿನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ತುಂಬೆ, ಜನಪ್ರಿಯ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಅಬ್ದುಲ್ ಬಶೀರ್ ವಿ.ಕೆ., ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. ಸೆನೆಟ್ ಸದಸ್ಯ ಡಾ. ಮುಸ್ತಪಾ ಬಸ್ತಿಕೋಡಿ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಝ್ ಎಚ್.ಐ., ಎ.ಜೆ. ಆಸ್ಪತ್ರೆಯ ಹಿರಿಯ ಸ್ಥಾನಿಕ ವೈದ್ಯೆ ಡಾ. ಹಸೀನಾ ಪೊನ್ನೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಮಧ್ಯಾಹ್ನ12.00ಕ್ಕೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷಿಯನ್ನು ಪತ್ರಕರ್ತ ಬಶೀರ್ ಅಡ್ಯನಡ್ಕ ನಿರೂಪಿಸಲಿದ್ದು, ತುಂಬೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಿ.ಬಿ. ಅಬ್ದುಲ್ ರಹಿಮಾನ್, ಲೇಖಕಿ, ಕವಯತ್ರಿ ಆಯಿಷಾ ಯು.ಕೆ., ಯೇನಪೋಯ ಪದವಿ ಕಾಲೇಜಿನ ಪ್ರಾಧ್ಯಾಪಕ ಮುಹಮ್ಮದ್ ಶಾಹಿದ್ ವಳವೂರು ಚರ್ಚಾಗೋಷ್ಠಿಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.00ರಿಂದ ಬ್ಯಾರಿ ಕವಿಗೋಷ್ಠಿ ನಡೆಯಲಿದೆ.ಸಂಜೆ 4.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಡಾ. ಎಂ.ಎಂ. ಶರೀಫ್, ಅಬ್ಬೋನು ನಂದಾವರ, ಅವ್ವಮ್ಮ ಒಕ್ಕೆತ್ತೂರು, ಅಬ್ದುಲ್ ಖಾದರ್ (ಮೋನುಞ್ಞಿ) ಕಲ್ಲಡ್ಕ, ಇಸ್ಮಾಯಿಲ್ ಅರಬಿ ಬಂಟ್ವಾಳ, ಮೊಹಮ್ಮದ್ ಕೋಡಪದವು, ಝುಬೈದಾ ಪರ್ಲೊಟ್ಟು ಸನ್ಮಾನ ಸ್ವೀಕರಿಸುವರು. ಮಾಜಿ ಸಚಿವ ಬಿ. ರಮಾನಾಥ ರೈ, ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಹಾಜಿ ಜಿ.ಎ. ಬಾವಾ, ಪುಣೆಯ ಡಾ. ಡಿ.ವೈ. ಪಾಟೀಲ್ ವಿವಿಯ ಕುಲಸಚಿವ ಡಾ. ಬಿ.ಎಂ. ಬೀರಾನ್ ಮೊಹಿದಿನ್, ಬಂಟ್ವಾಳ ತಾಪಂ ಮಾಜಿ ಅಧ್ಯಕ್ಷ ಹಾಜಿ ಉಸ್ಮಾನ್ ಕರೋಪಾಡಿ, ಹಿರಿಯ ಪತ್ರಕರ್ತ ಇಬ್ರಾಹಿಂ ಅಡ್ಕಸ್ಥಳ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪುತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಜಾಕ್ ಅನಂತಾಡಿ ಸಮಾರೋಪ ಬಾಷಣ ಮಾಡುವರು. ಸಮ್ಮೇಳನದಲ್ಲಿ ದಫ್, ಬ್ಯಾರಿ ಹಾಡುಗಳ ಸಂಭ್ರಮ ಮತ್ತು ‘ತೆರು ತಪ್ಪಿರ್ʼ ಬ್ಯಾರಿ ನಾಟಕ ಪ್ರದರ್ಶನಗೊಳ್ಳಲಿದೆ.
ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಅಬುಬಕರ್ ಅನಿಲಕಟ್ಟೆ, ತಾಲೂಕು ಸಮ್ಮೇಳನ ಕೋಶಾಧಿಕಾರಿ ಆನಿಯಾ ದರ್ಬಾರ್ ಹಂಝ ಬಸ್ತಿಕೋಡಿ, ಬ್ಯಾರಿ ಸಾಹಿತ್ಯ ಪರಿಷತ್ ಪ್ರಧಾನ ಕಾರ್‍ಯದರ್ಶಿ ಅಬ್ದುಲ್ ಲತೀಫ್ ನೇರಳಕಟ್ಟೆ, ಕೋಶಾಧಿಕಾರಿ ಮಹಮ್ಮದ್ ಸಾಗರ್, ಉಪಾಧ್ಯಕ್ಷರಾದ ಯೂಸುಫ್ ಕರಂದಾಡಿ, ಯು.ಮುಸ್ತಫಾ, ಸ್ವಾಗತ ಸಮಿತಿ ಪ್ರಧಾನ ಕಾರ್‍ಯದರ್ಶಿ ಪಿ.ಎಂ. ಅಶ್ರಫ್, ವೇದಿಕೆ ಸಮಿತಿ ಸಂಚಾಲಕ ಪಿ. ಮಹಮ್ಮದ್ ಪಾಣೆಮಂಗಳೂರು ಉಪಸ್ಥಿತರಿದ್ದರು.