ಸಾರಾಂಶ
ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠದ 17 ಮಂದಿ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠದ 17 ಮಂದಿ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ.ಸಾಮಾನ್ಯ ಕ್ಷೇತ್ರದಿಂದ ಅರುಣ್, ಅರುಣ್ ಕುಮಾರ್ ಕೆ., ಕಿರಣ್ ಕುಮಾರ್ ಎ., ಪ್ರೇಮನಾಥ ಬಂಟ್ವಾಳ, ಭೋಜ ಸಾಲಿಯಾನ್, ರಮೇಶ್ ಸಾಲಿಯಾನ್, ಸತೀಶ್, ರಮೇಶ್ ಸಾಲಿಯಾನ್, ಸುರೇಶ್ ಕುಲಾಲ್, ಸುರೇಶ್ ಕುಲಾಲ್ ಎನ್., ಹರೀಶ್, ಮಹಿಳಾ ಕ್ಷೇತ್ರದಿಂದ ಮಾಲತಿ ಮಚ್ಚೇಂದ್ರ, ವಿದ್ಯಾ, ಹಿಂ.ವರ್ಗ ‘ಎ’ ಕ್ಷೇತ್ರದಿಂದ ಜನಾರ್ದನ ಬೊಂಡಾಲ, ಹಿಂ.ವರ್ಗ ‘ಬಿ’ ಕ್ಷೇತ್ರದಿಂದ ಜಗನ್ನಿವಾಸ ಗೌಡ, ಪ.ಜಾ. ಕ್ಷೇತ್ರದಿಂದ ಗಣೇಶ್ ಸಮಗಾರ, ಪ.ಪಂ. ರೇಖಾ ನಾಯ್ಕ್ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಬ್ಯಾಂಕಿನ ಹಾಲಿ ಅಧ್ಯಕ್ಷ ಸುರೇಶ್ ಕುಲಾಲ್ ಬಂಟ್ವಾಳ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿದ್ದರು.
ಬಂಟ್ವಾಳ ಬೈಪಾಸ್‌ನಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಚುನಾವಣೆ ನಡೆಯಿತು. ಪುತ್ತೂರು ತಾಲೂಕು ಸಹಕಾರಿ ಅಧಿಕಾರಿ ರಘು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.ಸಂಘದ ಸಿಒ ಭೋಜ ಮೂಲ್ಯ ಹಾಗೂ ಸಿಬ್ಬಂದಿ ಸಹಕರಿಸಿದ್ದರು. ವಿಜೇತ ಅಭ್ಯರ್ಥಿಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಮಂಡಲದ ಅಧ್ಯಕ್ಷ ಚೆನ್ನಪ್ಪ ಕೋಟ್ಯನ್, ಕೋಶಾಧಿಕಾರಿ ದಿನೇಶ್ ಭಂಡಾರಿ ಮೊದಲಾದವರು ಅಭಿನಂದಿಸಿದ್ದಾರೆ.