ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಿಲ್ಲವ ಮಹಿಳಾ ಸಮಿತಿ, ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ 2026 ನೇ ಸಾಲಿನ ಕೋಟಿ ಚೆನ್ನಯ ಕ್ರೀಡೋತ್ಸವ 25ರಂದು

ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಿಲ್ಲವ ಮಹಿಳಾ ಸಮಿತಿ, ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ 2026 ನೇ ಸಾಲಿನ ಕೋಟಿ ಚೆನ್ನಯ ಕ್ರೀಡೋತ್ಸವ 25ರಂದು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಈ ಮಾಹಿತಿ ನೀಡಿದರು.

ಈ ಬಾರಿ 27 ತಂಡಗಳು ಭಾಗವಹಿಸಲಿವೆ. ಪುರುಷರ ವಿಭಾಗದಲ್ಲಿ ಕಬಡ್ಡಿ , ಹಗ್ಗ ಜಗ್ಗಾಟ ವಾಲಿಬಾಲ್ ಮಹಿಳೆಯರ ವಿಭಾಗದಲ್ಲಿ ತ್ರೋಬಾಲ್, ಹಗ್ಗಜಗ್ಗಾಟ ಗುಂಪು ಸ್ಪರ್ಧೆಗಳು ಮತ್ತು ವಿವಿಧ ವಿಭಾಗದಲ್ಲಿ 50 ಮೀ,100 ಮೀ, 200 ಮೀ, ರಿಲೇ, ಗುಂಡೆಸೆತ, ಉದ್ದಜಿಗಿತ, ನಡಿಗೆ ಹಾಗೂ ಲಕ್ಕೀಗೇಮ್ ಸ್ಪರ್ಧೆಗಳು ನಡೆಯಲಿದೆ. ಬೆಳಗ್ಗೆ 9.30 ರಿಂದ ಸಂಜೆ ಗಂಟೆ 6ರ ವರೆಗೆ ಬಂಟ್ವಾಳ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ನಡುವೆ ತೀವ್ರ ಪೈಪೋಟಿಯ ಸ್ಪರ್ಧೆಗಳು ನಡೆಯಲಿದೆ ಎಂದರು.ಉದ್ಘಾಟನಾ ಸಮಾರಂಭ :ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಸಮಾರಂಭ ಉದ್ಘಾಟಿಸಲಿದ್ದಾರೆ. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಶಾಸಕ ಬಿ.ಕೆ ಹರಿಪ್ರಸಾದ್, ಹಾಗೂ ಬಂಟ್ವಾಳ ಡಿವೈಎಸ್.ಪಿ ವಿಜಯ ಪ್ರಸಾದ್ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ, ಗುರುಧರ್ಮ ಪ್ರಚಾರಸಭಾ, ಕರ್ನಾಟಕ ಯೋಜನಾ ಘಟಕದ ಸಂಚಾಲಕರಾದ ಗೋಪಿ ಕೃಷ್ಣಪ್ಪ ಕ್ರೀಡಾ ಜ್ಯೋತಿ ಹಸ್ತಾಂತರ ಮಾಡಲಿದ್ದಾರೆ, ನಂದಗುಡಿ-ಬೆಂಗಳೂರು ಗ್ರಾಮಾಂತರ ಇನ್ಸ್ಪೆಕ್ಟರ್ ಆಫ್ ಪೊಲೀಸ್ ಶಾಂತರಾಮ್ ಕುಂದರ್ ಧ್ವಜಾರೋಹಣ ಮಾಡಲಿದ್ದಾರೆ ಎಂದರು.ಪಡುಮಲೆ ಕೋಟಿಚೆನ್ನಯ ಜನ್ಮಸ್ಥಾನ, ಸಂಚಲನಾ ಸಮಿತಿ, ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕೋಟಿ ಚೆನ್ನಯ ಕ್ರೀಡಾಕೂಟದ ಸಂಚಾಲಕ ಬೇಬಿ ಕುಂದರ್ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದರು, ಕೋಟ ಶ್ರೀನಿವಾಸ ಪೂಜಾರಿ ಸಹಿತ ಪ್ರಮುಖರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಕ್ರೀಡಾಕೂಟ ಯಶಸ್ಸಿಗೆ ಸಹಕಾರ ಕೋರಿದರು. ಕ್ರೀಡೋತ್ಸವ ಸಮಿತಿ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿ ಸುಂದರ ಪೂಜಾರಿ ಬೊಳಂಗಡಿ, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಉಪಾಧ್ಯಕ್ಷ ಜಯಪ್ರಕಾಶ್ ಜೆ ಎಸ್, ಕೋಶಾಧಿಕಾರಿ ಸುನೀಲ್ ಕುಂದರ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್ ಉಪಸ್ಥಿತರಿದ್ದರು.