ಮಾಣಿ ಬಾಲವಿಕಾಸ ಶಾಲೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಸಮಾರೋಪ

| Published : Oct 31 2024, 12:51 AM IST

ಸಾರಾಂಶ

ಬಾಲವಿಕಾಸ ಟ್ರಸ್ಟ್‌ನ ಅಧ್ಯಕ್ಷ, ಶಾಲಾಸಂಚಾಲಕರಾದ ಪ್ರಹ್ಲಾದ ಶೆಟ್ಟಿ ಜೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದ ಸಮಗ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಶ್ರದ್ಧೆ, ಪ್ರೀತಿ ಹಾಗೂ ಕಾಳಜಿಯ ಸಂಘಟನೆಯಿಂದ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿದೆ ಎಂದು ಉದ್ಯಮಿ ಜಗನ್ನಾಥ ಚೌಟ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಕಲ್ಲಡ್ಕ ವಲಯ ಕ್ರೀಡಾಕೂಟ ಸಮಿತಿ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಮೈದಾನದಲ್ಲಿ ನಡೆದ 14 ರಿಂದ 17 ವಯೋಮಿತಿಯೊಳಗಿನ ಬಾಲಕ -ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು.

ಬಾಲವಿಕಾಸ ಟ್ರಸ್ಟ್‌ನ ಅಧ್ಯಕ್ಷ, ಶಾಲಾಸಂಚಾಲಕರಾದ ಪ್ರಹ್ಲಾದ ಶೆಟ್ಟಿ ಜೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದ ಸಮಗ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಉದ್ಯಮಿ‌ ಪುರುಷೋತ್ತಮ ಶೆಟ್ಟಿ, ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ದೈಹಿಕ ಶಿಕ್ಷಕ ಪರಿವೀಕ್ಷಕ ಶಿವಪ್ರಸಾದ್ ರೈ, ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ರಾಜೇಂದ್ರ ರೈ, ಕಲ್ಲಡ್ಕ ವಲಯ ಕ್ರೀಡಾಸಮಿತಿ ಅಧ್ಯಕ್ಷ ಕಮಲಾಕ್ಷ ಕಲ್ಲಡ್ಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್‌ ಲೋಬೋ, ಉಪಾಧ್ಯಕ್ಷ ಹರಿಪ್ರಸಾದ್‌, ಚಿನ್ನಪ್ಪ, ಸಿ.ಆರ್.ಪಿ. ಸತೀಶ್ ರಾವ್, ನೋಡಲ್‌ ಶಿಕ್ಷಕ ಜಗದೀಶ್‌ ಬಾಳ್ತಿಲ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎರಡು ದಿನಗಳ‌ ಕಾಲ ನಡೆದ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಿದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಪ್ರಸಾದ್ ರೈ, ಕಮಲಾಕ್ಷ ಕಲ್ಲಡ್ಕ, ಜಗದೀಶ್ ಬಾಳ್ತಿಲ, ಬಾಲವಿಕಾಸ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಪೂಜಾರಿ, ವಿಶಾಲಾಕ್ಷಿ ಎಚ್‌. ಆಳ್ವ, ಶಾಲಾ ವ್ಯವಸ್ಥಾಪಕಿ ನಯನ ಎಂ., ಶಿಕ್ಷಕರಾದ ಅರುಣ್ ಕುಮಾರ್, ಕಾರ್ತಿಕ್ ಮೊದಲಾದವರು ಉಪಸ್ಥಿತರಿದ್ದರು.