ಶರನ್ನವರಾತ್ರಿಯ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಲೋಕಕಲ್ಯಾಣದ ಜೊತೆಗೆ, ನಾಡಿನಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ನೆಲೆಸಲೆಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಮೂಲ್ಕಿ : ಶರನ್ನವರಾತ್ರಿಯ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಲೋಕಕಲ್ಯಾಣದ ಜೊತೆಗೆ, ನಾಡಿನಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ನೆಲೆಸಲೆಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭ ದೇವಳದ ಅನುವಂಶಿಕ ಮೊಕ್ತೇಸರರಾದ ದುಗ್ಗಣ್ಣ ಸಾವಂತ ಅರಸರು, ಧಾರ್ಮಿಕ ಪರಿಷತ್‌ ಜಿಲ್ಲಾ ಸದಸ್ಯ ಸುಬ್ರಹ್ಮಣ್ಯ ಭಟ್, ದೇವಳದ ಜೀರ್ಣೋದ್ಧಾರ ಸಮಿತಿ ಸದಸ್ಯ ರಾಮಚಂದ್ರ ನಾಯ್ಕ ಕೊಲ್ನಾಡು ಗುತ್ತು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಆಳ್ವ ವಂದಿಸಿದರು. ಲಕ್ಷ್ಮಿಕಾಂತ್ ಭಟ್ ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಸಂಜೆ ವರ್ಣ ಆರ್ಟ್ಸ್‌ ಅಕಾಡೆಮಿ ಹೈದರಬಾದ್‌ ನವರಿಂದ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯ. ನಾಟ್ಯಾರಾಧನೆ ಕಲಾ ಕೇಂದ್ರ ಉರ್ವದವರಿಂದ ಭರತನಾಟ್ಯ ಹಾಗೂ ಜಾನಪದ ನೃತ್ಯ ವ್ಯೆವಿಧ್ಯ ಕಾರ್ಯಕ್ರಮ ಜರುಗಿತು. ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಪ್ರಯುಕ್ತ ಬೆಳಗ್ಗೆ ಚಂಡಿಕಾಯಾಗ, ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ, ರಾತ್ರಿ ವಿಶೇಷ ಪೂಜೆ, ರಂಗ ಪೂಜೆ, ಸುಹಾಸಿನಿ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.