ಸಾರಾಂಶ
ಕನ್ನಡಪ್ರಭವಾರ್ತೆ ಮೂಲ್ಕಿ
ಬಪ್ಪನಾಡು ಕ್ಷೇತ್ರದ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸಿ 12 ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಮನೋಹರ್ ಶೆಟ್ಟಿ ಅಜರಾಮರರು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.ಮೂಲ್ಕಿಯ ಬಪ್ಪನಾಡು ಜ್ಞಾನ ಮಂದಿರ ಸಭಾಭವನದಲ್ಲಿ ನಡೆದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎನ್ ಎಸ್ ಮನೋಹರ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.
ಮೂಲ್ಕಿ ಸೀಮೆಯ ಅರಸರು ಹಾಗೂ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ಮಾತನಾಡಿ, ದೇವರ ಪರಮ ಭಕ್ತನಾಗಿ, ದೇವಸ್ಥಾನದ ಅಭಿವೃದ್ಧಿ ಸಹಿತ ಪ್ರತಿಯೊಂದು ಚಟುವಟಿಕೆಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಕ್ಷೇತ್ರಕ್ಕೆ ಘನತೆಯನ್ನು ತಂದು ಕೊಟ್ಟಿದ್ದಾರೆಂದು ಹೇಳಿದರು .ಮಾಜಿ ಸಚಿವ ಅಭಯ ಚಂದ್ರ ಜೈನ್ ಮಾತನಾಡಿ, ಬ್ಯಾಂಕ್ ಪ್ರಬಂಧಕರಾಗಿದ್ದ ದಿನದಿಂದ ಮನೋಹರ್ ಶೆಟ್ಟಿಯವರು ಪರಿಚಿತರಾಗಿದ್ದು ಕಿರಿಯರಿಗೂ ಗೌರವ ಕೊಡುತ್ತಿದ್ದ ಅವರು ಅಪಾರ ಅನುಭವವನ್ನು ಹೊಂದಿದ್ದಾರೆಂದು ಹೇಳಿದರು. ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ, ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ಸುನಿಲ್ ಆಳ್ವ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಅತ್ತೂರು ಬೈಲು ವೆಂಕಟರಾಜ ಉಡುಪ, ಕಿನ್ನಿಗೋಳಿ ಯುಗಪುರುಷದ ಭುವನಾಭಿರಾಮ ಉಡುಪ, ರಾಮಚಂದ್ರ ನಾಯಕ್ ಕೋಲ್ನಾಡ್ ಗುತ್ತು, ಮೂಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್, ನಾಗೇಶ್ ಬಪ್ಪನಾಡು, ಶಿವಶಂಕರ್ ವರ್ಮ ಮತ್ತಿತರರು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ಸಾಯಿನಾಥ ಶೆಟ್ಟಿ ನಿರೂಪಿಸಿದರು. ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮೂಲಕ ನುಡಿ ನಮನ ಸಲ್ಲಿಸಲಾಯಿತು.