ಸಾರಾಂಶ
30ರಂದು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ, ರಾತ್ರಿ ಶಯನೋತ್ಸವ, ಮಾರ್ಚ್ 31 ರಂದು ಬ್ರಹ್ಮರಥೋತ್ಸವ ನಡೆಯಲಿದೆ.
ಮೂಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಶ್ರೀ ದೇವರ ಉತ್ಸವ ಬಲಿ, ಬೊಂಬೆ ರಥೋತ್ಸವ, ಸ್ವರ್ಣ ಪಲ್ಲಕಿ ಉತ್ಸವ, ಬಾಕಿಮಾರು ದೀಪೋತ್ಸವ ಹಾಗೂ ಕಟ್ಟೆ ಪೂಜೆ ನಡೆಯಿತು.
ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ, ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಎನ್.ಎಸ್. ಮನೋಹರ ಶೆಟ್ಟಿ, ಕಾರ್ಯನಿರ್ವಣಾಧಿಕಾರಿ ಜಯಮ್ಮ ಮತ್ತಿತರರು ಉಪಸ್ಥಿತರಿದ್ದರು. 30ರಂದು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ, ರಾತ್ರಿ ಶಯನೋತ್ಸವ, ಮಾರ್ಚ್ 31 ರಂದು ಬ್ರಹ್ಮರಥೋತ್ಸವ ನಡೆಯಲಿದೆ.