ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ, ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಮಾಜಿ ಸಚಿವ ಎಸ್.ಜಿ.ನಂಜಯ್ಯನಮಠ, ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಇತರರು ಗಾಂಧಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಷ್ಪಾರ್ಚನೆ ಮಾಡಿ ನಮಿಸಿದರು.
ವಿವಿಧ ಧರ್ಮದ ಗುರುಗಳಾದ ಸಂಸ್ಕೃತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಆಸೀಫ್ ಎಲ್. ಮುದಗಲ್ಲ ಕುರಾನ ಹಾಗೂ ಫ್ರೆಡ್ಡಿರಾಜ ಬೈಬಲ್ ಕುರಿತು ಪಠಣ ಮಾಡಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿದರು.ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಫೀರಜಾದೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮಾಗಾಂಧೀಯವರ 156ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ವಿತರಿಸಲಾಯಿತು. ಪ್ರೌಢಶಾಲಾ ವಿಭಾಗದಲ್ಲಿ ವೈಷ್ಣವಿ ಕರಲಟ್ಟಿ (ಪ್ರಥಮ), ನವ್ಯಶ್ರೀ ಹುಡೇದ (ದ್ವಿತೀಯ), ಸೌಮ್ಯ ಸಂತಪ್ಪನವರ (ತೃತೀಯ), ಕಾಲೇಜು ವಿಭಾಗದಲ್ಲಿ ಸಂಗೀತಾ ಬಾಗೋಡಿ (ಪ್ರಥಮ), ಕಾವೇರಿ ವಿಭೂತಿ (ದ್ವಿತೀಯ), ಪೂಜಾ ಅಗಸದವರ (ತೃತೀಯ), ಪದವಿ, ಸ್ನಾತಕೋತ್ತರ ವಿಭಾಗದಲ್ಲಿ ಶ್ರೀದೇವಿ ಕೋನಪ್ಪನವರ (ಪ್ರಥಮ), ಸ್ವಾತಿ ರಾಠೋಡ (ದ್ವಿತೀಯ), ಜ್ಯೋತಿ ಸಿದ್ದಾಪೂರ (ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.